ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಒಂದು ದಿನ ಕಾಲಾವಕಾಶ ಕೊಡಿ ಎಂಬುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಮಂಡ್ಯ ಕಾರ್ಯಕರ್ತರಾದ ತಾವೆಲ್ಲರೂ ಬಂದು ಒತ್ತಾಯ ಮಾಡುತ್ತಿದ್ದೀರಿ. ನಾಳೆ ಚನ್ನಪಟ್ಟಣ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಮಂಡ್ಯದಲ್ಲಿ ತಂದೆಯವರೇ ಚುನಾವಣೆಗೆ ನಿಲ್ಲಲಿ ಎಂದು ಒತ್ತಡ ಇದೆ. ನಮ್ಮ ಕುಟುಂಬದಿಂದ ಚುನಾವಣೆ ಸ್ಪರ್ಧೆ ಬೇಡ ಅಂದುಕೊಂಡಿದ್ದೆವು. ಆದರೆ ಮಂಡ್ಯದ ಪರಿಸ್ಥಿತಿಯೇ ಬೇರೆ ಇದೆ. ಹೀಗಾಗಿ ಕುಮಾರಣ್ಣ ಅವರ ಮೇಲೆ ನೀವೆಲ್ಲಾ ಒತ್ತಡ ಹಾಕುತ್ತಿದ್ದೀರಿ. ತಂದೆಯವರು ಒಂದು ದಿನದ ಸಮಯಾವಕಾಶ ಕೇಳಿದ್ದಾರೆ. ನಾಳೆ (ಸೋಮವಾರ) ಸಂಜೆಯೊಳಗೆ ಅಭ್ಯರ್ಥಿ ಯಾರೆಂದು ಅಂತಿಮ ಆಗಬಹುದು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.
2019ರ ಲೊಕಸಭೆ ಚುನಾವಣೆಯಲ್ಲಿ ನನಗೆ ಕೆಲವರ ಕುತಂತ್ರದಿಂದ ಸೋಲಾಯಿತು. ಚಿತಾವಣೆಯಿಂದಲೇ ನಾನು ಸೋತೆ. ಹಾಗಾಗಿ ಜಿಲ್ಲೆಯ ಜನರು, ಕಾರ್ಯಕರ್ತರು ನಾನು ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಕಳೆದ ಬಾರಿ ಸೊತಿದ್ದೀರಿ, ಈ ಬಾರಿ ಗೆಲ್ಲಿಸುತ್ತೇವೆ ಎಂದು ಹೇಳುತ್ತಿದ್ದಾರೆ. ನಾಳೆ ಸಂಜೆಯೊಳಗೆ ತಂದೆಯವರ ನಿರ್ಧಾರ ಗೊತ್ತಾಗಲಿದೆ ಎಂದು ಅವರು ನುಡಿದರು.
ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಹಿರಿಯ ನಾಯಕರು, ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ, ಶಾಸಕರಾದ ಹೆಚ್.ಟಿ.ಮಂಜುನಾಥ್, ಮಾಜಿ ಶಾಸಕರಾದ ಡಾ.ಕೆ.ಅನ್ನದಾನಿ,ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್, ಜಿಲ್ಲಾ ಯುವ ಜನತಾದಳ ಅಧ್ಯಕ್ಷ ರವಿಕುಮಾರ್, ಹಿರಿಯ ಮುಖಂಡ ರಾಮಚಂದ್ರ ಸೇರಿದಂತೆ ಸಾವಿರಾರು ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿಗಳ ನಿವಾಸದ ಮುಂದೆ ನೆರೆದಿದ್ದರು.
ನಾಳೆ ಸಂಜೆಯೊಳಗೆ ‘ಮಂಡ್ಯ ಲೋಕಸಭಾ ಕ್ಷೇತ್ರ’ಕ್ಕೆ ಅಭ್ಯರ್ಥಿ ಘೋಷಣೆ – HDK
ಲೋಕಸಭಾ ಚುನಾವಣೆ: ಈವರೆಗೆ ರಾಜ್ಯದಲ್ಲಿ ‘ಎಷ್ಟು ಹಣ, ಮದ್ಯ, ವಸ್ತು ಸೀಜ್’ ಗೊತ್ತಾ? ಇಲ್ಲಿದೆ ಡೀಟೆಲ್ಸ್