ನವದೆಹಲಿ: ಬಿಜೆಪಿಯಿಂದ ಲೋಕಸಭಾ ಚುನಾವಣೆ ಐದನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಐದನೇ ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಮಾಜಿ ಸಚಿವ ಕೆ ಸುಧಾಕರ್ ಅವರಿಗೆ ಟಿಕೆಟ್ ನೀಡಲಾಗಿದೆ. ಆದ್ರೇ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಗೆ ಲೋಕಸಭಾ ಚುನಾವಣೆಗೆ ಈ ಬಾರಿ ಟಿಕೆಟ್ ಮಿಸ್ ಆಗಿದೆ.
ಈ ಕುರಿತಂತೆ ಇಂದು ಬಿಜೆಪಿ ಹೈಕಮಾಂಡ್ 5ನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ರಾಜಾ ಅಮರೇಶ್ವರ ನಾಯಕಗೆ ಟಿಕೆಟ್ ನೀಡಲಾಗಿದೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಡಾ.ಕೆ ಸುಧಾಕರ್ ಅವರಿಗೆ ಟಿಕೆಟ್ ನೀಡಿದ್ರೇ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿಗೆ, ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಗೆ ಟಿಕೆಟ್ ನೀಡಲಾಗಿದೆ.
ಇದಪ್ಪ ‘ಸಂಚಾರಿ ಪೊಲೀಸ್’ ಕೆಲಸ ಅಂದ್ರೆ.! ಈ ಸುದ್ದಿ ಓದಿ, ನೀವು ‘ಹ್ಯಾಟ್ಸ್ ಆಫ್’ ಹೇಳೋದು ಗ್ಯಾರಂಟಿ
BREAKING: ಮಾಜಿ ಸಂಸದ ‘ನವೀನ್ ಜಿಂದಾಲ್’ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ, ಬಿಜೆಪಿ ಸೇರ್ಪಡೆ