ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಬೇಗೆ ಹೆಚ್ಚಳವಾಗುತ್ತಿದ್ದು, ತಾಪಮಾನ ಹೆಚ್ಚಳದಿಂದ ರಾಜ್ಯದ ಜನರು ತತ್ತರಿಸಿದ್ದಾರೆ. ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಹೀಟ್ ವೇವ್ ಸ್ಟೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳುಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೆಲವು ಸಲಹೆಗಳನ್ನು ನೀಡಿದೆ.
ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ (ಛತ್ರಿ) ಬಳಸಿರಿ ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಸಿ. ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಿ, ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳಯದು. ಹತ್ತಿಯ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಿರಿ. ಹಿರಿಯ ನಾಗರಿಕರಿಗೆ ಮಕ್ಕಳಿಗೆ ಹೆಚ್ಚು ನೀರು ಕುಡಿಯುಲು ಕೊಡಬೇಕು. ಬೆಳ್ಳಿಗೆ 11 ರಿಂದ ಸಂಜೆ 4 ರವರೆಗೆ ಹೊರಾಂಗಣ ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡಲು ಪ್ರಯತ್ನಿಸಿ.
ಸಾಕಷ್ಟು ನೀರು ಕುಡಿಯಿರಿ. ಮಜ್ಜಿಗೆ ಮತ್ತು ಗ್ಲೂಕೋಸ್ ಅಥವಾ ಓ.ಆರ್.ಎಸ್ ನಂತಹ ದ್ರಮ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಿ. ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಕಿಟಕಿ, ಛಾಯೆಗಳನ್ನು ಬಳಸಿ. ಫ್ಯಾನ್ ಬಳಕೆದಂತಹ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ. ಹೀಟ್ ಸ್ಟೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ. ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಠ ಬಟ್ಟೆಯನ್ನು ಹೊಂದಿರುವಂತೆ ನೋಡಿಕೊಂಡು, ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಮಾಡಬೇಕು ಅಥವಾ ಐಸ್ ಪ್ಯಾಕ್ಗಳನ್ನು ಉಪಯೋಗಿಸಬಹುದು ಅಥವಾ ವ್ಯಕ್ತಿಯನ್ನು ಐಸ್ ಬ್ಲಾಕ್ ಗಳ ಮಧ್ಯ ಇಡಬಹುದು. ಹೀಟ್ ವೇವ್ ಸ್ಪೋಕ್ ಗೆ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡುಬರದಿದ್ದರೆ, ಅವರನ್ನು ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು.
ಬೇಸಿಗೆಯಲ್ಲಿ ಹೊರಗಿನಿಂದ ಬಂದ ತಕ್ಷಣ ನೀರು, ಓ.ಆರ್.ಎಸ್ ಅಥವಾ ಮಜ್ಜಿಗೆಯಂತಹ ಪಾನೀಯಗಳನ್ನು ಬಳಸಬಹುದು. ತುರ್ತು ಸೇವೆಗೆ ಶುಲ್ಕ ರಹಿತ ಸಹಾಯವಾಣಿ ಸಂಖ್ಯೆ 108 & 102 ಗೆ ಸಂಪರ್ಕಿಸಬಹುದ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.