ಮಂಡ್ಯ : ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮಂಡ್ಯ ಲೋಕಸಭೆ ಕ್ಷೇತ್ರವನ್ನು ಬಿಜೆಪಿ ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದು, ಸಂಸದೆ ಸುಮಲತಾ ಅಂಬರೀಶ್ ಅತಂತ್ರರಾಗಿದ್ದು, ಇಂದು ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಮಂಡ್ಯ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಸುಮಲತಾ ಅಂಬರೀಶ್ ಗೆ ಬಿಜೆಪಿ ಶಾಕ್ ನೀಡಿದ್ದು, ಬಿಜೆಪಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಅವರು ಇಂದು ತಮ್ಮ ಕಾರ್ಯಕರ್ತರ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಇಂದು ಸಮಲತಾ ಅವರು ಮಂಡ್ಯದಲ್ಲಿ ತಮ್ಮ ಬೆಂಬಲಿಗರೊಂದಿಗೆ ಮಹತ್ವದ ಸಭೆ ನಡೆಸಲಿದ್ದು, ತಮ್ಮ ರಾಜಕೀಯ ನಡೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.