ಹೊಸಪೇಟೆ : ಕಲುಷಿತ ನೀರು ಕುಡಿದು 18 ಜನರು ಅಸ್ವಸ್ಥರಾಗಿರುವ ಘಟನೆ ಹೊಸಪೇಟೆ ತಾಲೂಕಿನ ನಲ್ಲಾಪುರ ಗ್ರಾಮದಲ್ಲಿ ನಡೆದಿದೆ.
ನಲ್ಲಾಪುರ ಗ್ರಾಮದಲ್ಲಿ ಕಲುಷಿತ ನೀರು ನೀರು ಕುಡಿದ 18 ಜನರು ವಾಂತಿ, ಬೇಧಿಯಿಂದ ಅಸ್ವಸ್ಥರಾಗಿದ್ದು, ಕೂಡಲೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗ್ರಾಮದಲ್ಲಿನ ಪೈಪ್ ಲೈನ್ ಒಡೆದು ಕಲುಷಿತ ನೀರು ಮಿಕ್ಸ್ ಆಗಿರುವ ಆರೋಪದ ಜೊತೆಗೆ ಓವರ್ ಹೆಡ್ ಟ್ಯಾಂಕ್ ಸ್ವಚ್ಛ ಮಾಡದೇ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಗ್ರಾಮಪಂಚಾಯಿತಿ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಗಿದ್ದಾರೆ.