ಶಿವಮೊಗ್ಗ : ರಾಜ್ಯಾದ್ಯಂತ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷೆ ದಿನವೇ ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಶಿವಮೊಗ್ಗ ತಾಲೂಕಿನ ಮೂಡಲವಿಠಲಾಪುರದಲ್ಲಿ ರಸ್ತೆ ದಾಟುವಾಗಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಯನ್ನು ಶಿವಮೊಗ್ಗ ತಾಲೂಕಿನ ಜಂಬರಘಟ್ಟ ನಿವಾಸಿ ಉಮ್ಮೆ ಕೂಲ್ಸಂ ಎಂದು ಗುರುತಿಸಲಾಗಿದೆ.
ಮತ್ತೊಂದು ದುರಂತದಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಆಂದೋಳ್ಳಿ ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಪರಶುರಾಮ ಬಾಬು ಎಂದು ಗುರುತಿಸಲಾಗಿದೆ.