ಹಾವೇರಿ : ಹಾವೇರಿ ಜಿಲ್ಲೆಯಲ್ಲಿ ನದಿಯಲ್ಲಿ ಮರಳಿನ ಗುಂಡಿಯಲ್ಲಿ ಬಿದ್ದು ಇಬ್ಬರು ಸಹೋದರರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ನದಿಹರಳಹಳ್ಳಿಯಲ್ಲಿ ನದಿಯಲ್ಲಿದ್ದ ಗುಂಡಿಯಲ್ಲಿ ಮುಳುಗಿ ಸಹೋದರರ ಸಾವನ್ನಪ್ಪಿರುವ ಘಟನೆ ನಡೆದಿದೆ. ನದಿಹರಳಹಳ್ಳಿ ಗ್ರಾಮದ ಮಂಜಪ್ಪ ರೇಖಾಮ್ಮ ದಂಪತಿಗಳ ಪುತ್ರರಾದ ಬಸವರಾಜ್ ಪವಾರ (12), ನಾಗರಾಜ್ ಪವಾರ್ (10) ಸಾವನ್ನಪ್ಪಿದ ದುರ್ದೈವಿಗಳು.
ಸ್ಥಳಕ್ಕೆ ಪೋಲಿಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.