ಹುಬ್ಬಳ್ಳಿ : ಭ್ರಷ್ಟಾಚಾರ ಆರೋಪಗಳನ್ನು ಹೊತ್ತಿರುವವರು ಯಾರೇ ಆಗಿರಲಿ ಅವರು ಬಿಜೆಪಿಗೆ ಹೋದರೆ ವಾಷಿಂಗ್ ಪೌಡರ್ ನಿರ್ಮಾ ರೀತಿ ಅವರು ಶುದ್ಧರಾಗುತ್ತಾರೆ ಎಂದು ಜನಾರ್ಧನ ರೆಡ್ಡಿ ಬಿಜೆಪಿ ಸೇರ್ಪಡೆ ಕುರಿತಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ವೆಂಗ್ಯವಾಡಿದ್ದಾರೆ.
ತಮ್ಮನನ್ನು ಗೆಲ್ಲಿಸಿಕೊಡುವಂತೆ ಡಿಕೆ ಶಿವಕುಮಾರ್ ಕಾಲಿಗೆ ಬಿದ್ದಿದ್ರು : ಬಿಜೆಪಿ ನಾಯಕ ಸಿಪಿ ಯೋಗೇಶ್ವರ್
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ನಾ ಖಾವುಂಗಾ ನಾ ಖಾನೆ ದುಂಗ ಎಂದು ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ ಎಂದು ಹೇಳುತ್ತಿದ್ದರು. ಆದರೆ ಈಗ ಜನಾರ್ದನ ರೆಡ್ಡಿಯನ್ನ ಬಿಜೆಪಿಗೆ ಸೇರ್ಪಡೆಗೊಳಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
‘ಮೇಕೆದಾಟು ಯೋಜನೆ’ಗೆ ಬೆಂಬಲ ನೀಡಿರುವ ‘HD ದೇವೇಗೌಡ’ಗೆ ಧನ್ಯವಾದ- ಮಾಜಿ MLC ರಮೇಶ್ ಬಾಬು
ಮೋದಿ ಅವರು ಭ್ರಷ್ಟಾಚಾರಕ್ಕೆ ಅವಕಾಶ ಕೊಡುವುದಿಲ್ಲ ಅಂತಾರೆ, ಈ ಹಿಂದೆ ಬಿಜೆಪಿಯವರು ರೆಡಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರು. ಈಗ ಅವರೇ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಯಾರೇ ಆಗಲಿ ಬಿಜೆಪಿಗೆ ಸೇರಿದರೆ ಶುದ್ಧರಾಗುತ್ತಾರೆ ಎಂದು ಜನಾರ್ದನ ರೆಡ್ಡಿ ಬಿಜೆಪಿ ಪಕ್ಷ ಸೇರ್ಪಡೆ ಕುರಿತಂತೆ, ಸಂತೋಷ ಲಾಡ್ ವ್ಯಂಗ್ಯವಾಡಿದರು.