ಯಾದಗಿರಿ: ಮೊದಲ ದಿನದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲೇ ವಿದ್ಯಾರ್ಥಿಗಳ ಸಾಮೂಹಿಕ ನಕಲು ಯಾದಗಿರಿಯ ಪರೀಕ್ಷಾ ಕೇಂದ್ರವೊಂದರಲ್ಲಿ ನಡೆದಿದೆ. ಈ ಸಂಬಂಧ ಇಬ್ಬರು ಶುಕ್ಷಕರನ್ನು ಅಮಾನತುಗೊಳಿಸಿ ಡಿಡಿಪಿಐ ಆದೇಶಿಸಿದ್ದಾರೆ.
ಯಾದಗಿರಿ ಜಿಲ್ಲೆಯ ಸುರಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಿತು. ಈ ಪರೀಕ್ಷೆಯ ವೇಳೆಯಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ನಕಲು ನಡೆಯುತ್ತಿರುವುದನ್ನು ಸಿಇಓ ಸಿಸಿಟಿವಿ ದೃಶ್ಯಾವಳಿಯಿಂದ ಗಮನಿಸಿದ್ದಾರೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಿಗೆ ಮಾಹಿತಿ ನೀಡದೇ ಕರ್ತವ್ಯ ಲೋಪ ಎಸಗಿದಂತ ಆರೋಪದಲ್ಲಿ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.
ಯಾದಗಿರಿ ಜಿಲ್ಲೆಯ ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕ ಸಾಹೇಬ್ ಗೌಡ ಹಾಗೂ ಸುರಪುರ ಪರೀಕ್ಷಾ ಕೇಂದ್ರದ ಮೇಲ್ವಿಚಾರಕ ಹನುಮಂತರಾಯ ಎಂಬುವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಈ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಕಾರಣರಾದಂತ ವಿದ್ಯಾರ್ಥಿಗಳಿಗೆ ಅಮಾನತು ಶಿಕ್ಷೆ ನೀಡಿ ಶಾಕ್ ನೀಡಲಾಗಿದೆ.
ಒಟ್ಟಾರೆಯಾಗಿ ಸರ್ಕಾರಿ ಪ್ರೌಢಶಾಲೆ, ಏವೂರ ತಾ. ಯಾದಗಿರಿ ಜಿಲ್ಲೆ ಹಾಗೂ ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜು(ಪೌಢ ವಿಭಾಗ), ಸುರಪುರ ತಾ. ಯಾದಗಿರಿ ಜಿಲ್ಲೆ, ಈ ಪರೀಕ್ಷಾ ಕೇಂದ್ರಗಳಲ್ಲಿ ಇಬ್ಬರು ಶಿಕ್ಷಕರಗಳು ಕಾರ್ಯ ನಿರ್ವಹಿಸುತ್ತಿದ್ದ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಅವಕಾಶ ಮಾಡಿಕೊಟ್ಟಿದಕ್ಕೆ ಹಾಗೂ ಕರ್ತವ್ಯ ನಿರ್ಲಕ್ಷ ತೋರಿದ ಹಿನ್ನಲೆಯಲ್ಲಿ, ಸದರಿ ಶಿಕ್ಷಕರನ್ನು ತಕ್ಷಣವೇ ಜಾರಿಗೆ ಬರುವಂತೆ ಉಪನಿರ್ದೇಶಕರು(ಆಡಳಿತ), ಯಾದಗಿರಿ ರವರು ಸೇವೆಯಿಂದ ಅಮಾನತ್ತುಗೊಳಿಸಿರುತ್ತಾರೆ.
ಮೊದಲ ದಿನದ ‘SSLC ಪರೀಕ್ಷೆ’ ಯಶಸ್ವಿ: ‘8.32 ಲಕ್ಷ ವಿದ್ಯಾರ್ಥಿ’ಗಳು ಹಾಜರ್, ಓರ್ವ ಡಿಬಾರ್
ಬೆಂಗಳೂರು: ಇಂದು ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ-1 ರಾಜ್ಯಾಧ್ಯಂತ ನಡೆಯಿತು. ಮೊದಲ ದಿನದ ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು 8.32 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ-1ಕ್ಕೆ ಹಾಜರಾಗಿದ್ದಾರೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಇಂದು ಲಾಂಗ್ವೇಜ್-1ರ ಪರೀಕ್ಷೆ ನಡೆಯಿತು. ಈ ಪರೀಕ್ಷೆಯನ್ನು ಬೆಂಗಳೂರು ನಾರ್ಥ್ ವಿಭಾಗದಿಂದ 46,313 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಬೆಂಗಳೂರು ಸೌತ್ 58,789 ವಿದ್ಯಾರ್ಥಿಗಳು, ರಾಮನಗರ 12,842, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 14,099 ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದಿದೆ.
ಇಂದಿನ ಲಾಂಗ್ವೆಜ್-1ರ ಪರೀಕ್ಷೆಗೆ 8,45,811 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 8,32,343 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ವಿಜಯಪುರದಲ್ಲಿ ನಕಲಿಗೆ ಯತ್ನಿಸಿದಂತ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. 13,468 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಶೇ.98.41ರಷ್ಟು ವಿದ್ಯಾರ್ಥಿಗಳು ಇಂದಿನ ಎಸ್ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ಹಾಜರಾಗಿರೋದಾಗಿ ತಿಳಿಸಿದೆ.
‘ಮೋದಿ’ಯವರ 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರದಿಂದ ದಾಖಲೆಯ ಗೆಲುವು- ಬಿ.ವೈ.ವಿಜಯೇಂದ್ರ
BREAKING: ಬಿಗ್ ಬಾಸ್ ಕನ್ನಡ ಖ್ಯಾತಿಯ ‘ಸೋನು ಶ್ರೀನಿವಾಸಗೌಡ’ಗೆ ’14 ದಿನ’ ನ್ಯಾಯಾಂಗ ಬಂಧನ, ಜೈಲುಪಾಲು