ಬೆಂಗಳೂರು : ಬೆಂಗಳೂರಿನಲ್ಲಿ ನಡೆಯುತ್ತಿರುವ ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಭದ್ರತಾ ಉಲ್ಲಂಘನೆಯಾಗಿದ್ದು, ಪಂದ್ಯ ನಡೆಯುತ್ತಿರುವಾಗಲೇ ಮೈದಾನಕ್ಕೆ ನುಗ್ಗಿ ಅಭಿಮಾನಿಯೊಬ್ಬ ಆರ್ ಸಿಬಿ ತಂಡದ ವಿರಾಟ್ ಕೊಹ್ಲಿ ಅವರ ಕಾಲು ಹಿಡಿದ ಘಟನೆ ನಡೆದಿದೆ.
ವ್ಯಕ್ತಿಯೊಬ್ಬ ಭದ್ರತೆಯನ್ನು ದಾಟಿ ವಿರಾಟ್ ಕೊಹ್ಲಿ ಬಳಿ ಮಧ್ಯದ ಮೈದಾನವನ್ನು ತಲುಪಿದನು. ಅವರು ನೇರವಾಗಿ ಹೋಗಿ ಕಿಂಗ್ ಕೊಹ್ಲಿಯ ಕಾಲು ಹಿಡಿದಿದ್ದಾನೆ. ನಂತರ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ತಲುಪಿ ಅವರನ್ನು ಮೈದಾನದಿಂದ ಹೊರಗೆ ಕರೆದೊಯ್ದರು. ಆರ್ಸಿಬಿ ಇನ್ನಿಂಗ್ಸ್ ವೇಳೆ ಈ ಘಟನೆ ನಡೆದಿದ್ದು, ಪಂದ್ಯವನ್ನು ಕೆಲಕಾಲ ನಿಲ್ಲಿಸಲಾಗಿತ್ತು. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
A fan breached the field and touched Virat Kohli's feet.
– King Kohli, an icon! ❤️pic.twitter.com/s82xq8sKhW
— Mufaddal Vohra (@mufaddal_vohra) March 25, 2024
ಐಪಿಎಲ್ 2024 ರ ಆರನೇ ಪಂದ್ಯವು ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಪಂಜಾಬ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಧವನ್ ನಾಯಕತ್ವದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಆರ್ ಸಿಬಿ ತಂಡ 19.2 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿ ಗೆಲುವು ಸಾಧಿಸಿದೆ.