ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ರೈತ ಸಿರಿ ಯೋಜನೆಯಡಿ ಸಿರಿಧಾನ್ಯ ಬೆಳೆಗಾರರಿಗೆ 10 ಸಾವಿರ ರೂ. ಪ್ರೋತ್ಸಾಹಧನ ನೀಡುತ್ತಿದೆ.
ಸಿರಿಧಾನ್ಯ ಬೆಳೆಗಾರರಿಗೆ ಉತ್ತೇಜನ ನೀಡಲು ರೈತಸಿರಿ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿ ಊದಲು, ನವಣೆ, ಹಾರಕ, ಕೂರಲೆ, ಸಾಮೆ ಮತ್ತು ಬರಗು (ರಾಗಿ, ಜೋಳ ಮತ್ತು ಸಜ್ಜೆ ಹೊರತುಪಡಿಸಿ) ಬೆಳೆಗಳನ್ನು ಬೆಳೆಯುವ ರೈತರಿಗೆ ಒಂದು ಹೆಕ್ಟೇರಿಗೆ ಹತ್ತು ಸಾವಿರ ರೂ.ಗಳಂತೆ ಎರಡು ಹೆಕ್ಟೇರ್ರವರೆಗೆ ಪ್ರೋತ್ಸಾಹ ಧನ ನೀಡಲಾಗುವುದು.
ಸಣ್ಣ ಅಥವಾ ಮಧ್ಯಮ ಗಾತ್ರದ ರೈತ (2 ಹೆಕ್ಟೇರ್ಗಿಂತ ಕಡಿಮೆ ಭೂಮಿ ಹೊಂದಿರುವವರು) ಅರ್ಹರು. ಹೆಚ್ಚಿನ ಮಾಹಿತಿಗಾಗಿ https://raitamitra.karnataka.gov.in/info-2/Raita+Siri/en ಭೇಟಿ ನೀಡಬಹುದು.
ಸಿರಿಧಾನ್ಯಗಳ ಪ್ರದೇಶ ವಿಸ್ತರಣೆ ಹಾಗೂ ಸಿರಿಧಾನ್ಯಗಳ ಉತ್ಪಾಧನೆಗೆ ಪೂರಕವಾದ ಸುಧಾರಿತ ತಾಂತ್ರಿಕತೆಗಳನ್ನು ಸೂಕ್ತ ಸಮಯದಲ್ಲಿ ಅಳವಡಿಸಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಿರಿಧಾನ್ಯಗಳ ಪ್ರಾಥಮಿಕ ಸಂಸ್ಕರಣಾ ಘಟಕಗಳ ಸ್ಥಾಪನೆಗಾಗಿ ಪ್ರೋತ್ಸಾಹಧನ ಪಡೆಯಲು ಸಿರಿಧಾನ್ಯ ಬೆಳೆಯುವ ಅರ್ಹ ರೈತರು, ನವೋದ್ಯಮಿಗಳು, ರೈತ ಸಂಘಗಳು, ನೋಂದಾಯಿತಿ ಸ್ವಸಹಾಯ ಸಂಘಗಳು, ರೈತ ಉತ್ಪಾದಕರ ಸಂಸ್ಥೆಗಳು, ಖಾಸಗಿ ಉದ್ದಿಮೆದಾರರು, ಸಾರ್ವಜನಿಕ ವಲಯ ಘಟಕಗಳು, ಜಂಟಿ ವಲಯ ಘಟಕಗಳು ಮತ್ತು ಆಹಾರ ಘಟಕಗಳ ಸ್ಥಾಪನೆ ಅಥವಾ ವಿಸ್ತರಣೆ ಅಥವಾ ಆಧುನೀಕರಣ ಉದ್ದಿಮೆಯಲ್ಲಿ ತೊಡಗಿಸಿಕೊಂಡವರು ಪ್ರತಿ ಘಟಕಕ್ಕೆ ಶೇ. 50ರ ಸಹಾಯಧನದಲ್ಲಿ ಗರಿಷ್ಠ ರೂ. 10.00 ಲಕ್ಷಗಳನ್ನು 2 ಕಂತುಗಳಲ್ಲಿ ಪಡೆಯಬಹುದಾಗಿದೆ.