ಬೆಂಗಳೂರು: ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅದೇ ಅವರು ಶಾಸಕರಾಗಿ ಆಯ್ಕೆಯಾಗಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಕರ್ನಾಟಕ ಹೈಕೋರ್ಟ್ ಗೆ ಬಿ.ಲಕ್ಷ್ಮೀದೇವಿ ಎಂಬುವರು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಅವರು ಶಾಸಕರಾಗಿ ಆಯ್ಕೆ ಅಸಿಂಧು ಗೊಳಿಸುವಂತೆ ಆರ್ಜಿಯನ್ನು ಸಲ್ಲಿಸಿದ್ದರು.
ಈ ತಕರಾರು ಅರ್ಜಿಯಲ್ಲಿ ಐದು ಗ್ಯಾರಂಟಿ ಯೋಜನೆಗಳು ಚುನಾವಣಾ ಅಕ್ರಮವಾಗಿವೆ. ಈ ಕಾರಣಕ್ಕೆ ಶಾಸಕ ರಿಜ್ವಾನ್ ಅರ್ಷದ್ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆಯೂ ಮನವಿ ಮಾಡಿದ್ದರು.
ಇಂದು ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಂತ ಹೈಕೋರ್ಟ್ ನ್ಯಾಯಪೀಠವು, ಶಾಸಕರಾಗಿ ಆಯ್ಕೆ ಅಸಿಂಧುಗೊಳಿಸುವಂತ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಶಿವಾಜಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಅವರಿಗೆ ಬಿಗ್ ರಿಲೀಫ್ ನೀಡಿದೆ.
ಸಾರ್ವಜನಿಕರೇ ಗಮನಿಸಿ : ‘ವೋಟರ್ ಐಡಿ’ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾರ್ಗದರ್ಶಿ
ರಾಜ್ಯದ ‘ಅನ್ನದಾತ’ರಿಗೆ ಗುಡ್ ನ್ಯೂಸ್ : ‘ರೈತ ಸಿರಿ’ ಯೋಜನೆಯಡಿ ಸಿಗಲಿದೆ 10,000 ರೂ. ಪ್ರೋತ್ಸಾಹಧನ