ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು ತೀವ್ರ ಕುತೂಹಲಕ್ಕೆ ಹೇಳಿಸುವ ಮಂಡ್ಯ ಹಾಸನ ಹಾಗೂ ಕೋಲಾರ ಕ್ಷೇತ್ರಗಳಿಗೆ ಇಂದು ಸಂಜೆಯೊಳಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.
‘ಪ್ರಾದೇಶಿಕ ಪಕ್ಷಕ್ಕೆ’ ಜನ ಬೆಂಬಲ ನೀಡಲಿಲ್ಲ, ಹೀಗಾಗಿ ನಾಡಿನ ರೈತರಿಗಾಗಿ ಬಿಜೆಪಿ ಜೊತೆಗೆ ಮೈತ್ರಿ : HD ಕುಮಾರಸ್ವಾಮಿ
ಇಂದು ಬೆಂಗಳೂರಿನಲ್ಲಿ ಜೆಡಿಎಸ್ ಮುಖಂಡರ ಹಾಗೂ ನಾಯಕರ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯೊಂದಿಗೆ ಮಾತನಾಡಿದ ಅವರು ಈಗಾಗಲೇ ಮಂಡ್ಯ ಕೋಲಾರದ ಜಿಲ್ಲಾ ಮುಖಂಡರನ್ನು ಕರೆಸಿ ಸಭೆ ಕರೆದಿದ್ದೇನೆ. ಇಂದು ಸಂಜೆ 4 ಅಥವಾ 5:00 ಒಳಗಾಗಿ ಅಭ್ಯರ್ಥಿಗಳ ಹೆಸರು ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದು ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.
ಮಂಡ್ಯ ಕ್ಷೇತ್ರಕ್ಕೆ ಸುಮಲತಾಗೆ ಟಿಕೇಟ್ ಮಿಸ್ ವಿಚಾರ : ನಾಳೆ ಆಪ್ತರು-ಬೆಂಬಲಿಗರ ಜೊತೆ ಮಹತ್ವದ ಸಭೆ
ಈ ವೇಳೆ ಹಾಸನ ಲೋಕಸಭಾ ಕ್ಷೇತ್ರಕ್ಕೆ ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಹೆಸರು ಬಹುತೇಕ ಅಂತಿಮವಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ ಅಲ್ಲದೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸ್ವತಹ ಕುಮಾರಸ್ವಾಮಿಯವರೇ ಸ್ಪರ್ಧಿಸಲಿದ್ದಾರೆ ಎಂದು ಪಕ್ಷವಾಗಿ ಎಚ್ ಡಿ ಕುಮಾರಸ್ವಾಮಿ ಅವರು ಇದೇ ಸಂದರ್ಭದಲ್ಲಿ ಸುಳಿವು ಕೊಟ್ಟಿದ್ದಾರೆ ಹೀಗಾಗಿ ಇಂದು ಸಂಜೆ 4:00 ಅಥವಾ 5:00 ಗಂಟೆ ಒಳಗಾಗಿ ಈ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಎಚ್ ಡಿ ಕುಮಾರಸ್ವಾಮಿ ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ತಿಳಿದುಬಂದಿದೆ.