ಬೆಂಗಳೂರು : ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ನಿರ್ವಾಹಕ ಮಹಿಳೆಯ ಮೇಲೆ ಅಟ್ಟಹಾಸ ಮೆರೆದಿದ್ದು, ಚಲಿಸುತ್ತಿದ್ದ ಬಸ್ ನಲ್ಲೆ ಹಲ್ಲೆ ಮಾಡಿ ಅಟ್ಟಹಾಸ ಮೆರೆದರುವ ಘಟನೆ ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಂದು ಬೆಳಿಗ್ಗೆ 10 ಗಂಟೆಗೆ ಈ ಘಟನೆ ಸಂಭವಿಸಿದ್ದು, ಚಲಿಸುತ್ತಿರುವ ಬಸ್ ನಲ್ಲಿ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಬಸ್ ನಿರ್ವಾಹಕನ ಜೊತೆಗೆ ಮಹಿಳೆಯೊಬ್ಬರು ಕಿರಿಕ್ ಮಾಡಿಕೊಂಡಿದ್ದಾರೆ. ಈ ವೇಳೆ ಕುಪಿತುಕೊಂಡ ನಿರ್ವಾಹಕ ಒಮ್ಮೆಲೆ ಮಹಿಳೆಯ ಮೇಲೆ ರೌದ್ರಾವತಾರ ತಾಳಿದ್ದು ಹಲ್ಲೆ ಮಾಡಿದ್ದಾನೆ.
ಮಹಿಳೆಯ ಮೇಲೆ ಬಿಎಂಟಿಸಿ ನಿರ್ವಾಹಕ ಹಲ್ಲೆ ನಡೆಸಿದ್ದು, ಚಲಿಸುತ್ತಿದ್ದ ಬಸ್ ನಲ್ಲಿ ಮಹಿಳೆಯ ಮೇಲೆ ಹಲ್ಲೆ ಟಿಕೆಟ್ ವಿಚಾರವಾಗಿ ನಡೆದ ಹಲ್ಲೆಯಾಗಿದ್ದು ಇಂದು ಬೆಳಗ್ಗೆ 10 ಗಂಟೆಗೆ ನಡೆದ ಹಲ್ಲೆ ಪ್ರಕರಣವಾಗಿದೆ.ಹಲ್ಲೆಯ ದೃಶ್ಯ ಪ್ರಯಾಣಿಕರ ಮೊಬೈಲ್ ನಲ್ಲಿ ಸೆರೆಯಾಗಿದೆ ಎಂದು ತಿಳಿದುಬಂದಿದೆ.ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.