ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ಅಗ್ನಿ ದುರಂತಗಳ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದೀಗ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿನ ವಿಲ್ಲಾದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು ಅದೃಷ್ಟವಶಾತ್ ಅಗ್ನಿಶಾಮಕ ಠಾಣಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಾಯಿ-ಮಗಳು ಬಚಾವ್ ಆಗಿದ್ದಾರೆ.
ಕಾನ್ಕಾರ್ಡ್ ಕುಪರ್ಟಿನೊ ಲೇಔಟ್ನ ವಿಲ್ಲಾದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿನ ವಿಲ್ಲಾದಲ್ಲಿ ಅನುಪ್ ಅಂಜನ್ ಮತ್ತು ಮೇಹಾ ದಂಪತಿ ವಾಸವಿದ್ದರು. ದೇವರ ಕೋಣೆಯಲ್ಲಿ ದೀಪ ಹಚ್ಚಿ ಬಾಲ್ಕನಿಯ ರೂಮ್ ನಲ್ಲಿ ತಾಯಿ-ಮಗಳು ಇದ್ದರು. ಈ ವೇಳೆ ದೇವರ ಕೋಣೆಯಲ್ಲಿದ್ದ ದೀಪದಿಂದ ಬೆಂಕಿ ಹೊತ್ತಿಕೊಂಡಿದೆ.
ಗ್ರೌಂಡ್ ಪ್ಲೋರ್ನಲ್ಲಿ ಸಂಪೂರ್ಣವಾಗಿ ಬೆಂಕಿ ಆವರಿಸಿದ್ದು, ಬಾಲ್ಕನಿಯಿಂದ ಕೆಳಗೆ ಬರಲಾಗದೆ ತಾಯಿ-ಮಗಳ ರೋಧನೆ ಅನುಭವಿಸಿದ್ದರು.ಬಳಿಕ ತಾಯಿ-ಮಗಳ ಕಿರುಚಾಟ ಕೇಳಿದ ಸ್ಥಳೀಯರು, ಕೂಡಲೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಠಾಣಾ ಸಿಬ್ಬಂದಿ, ಅಗ್ನಿ ಅವಘಡದಲ್ಲಿ ಸಿಲುಕಿದ್ದ ತಾಯಿ-ಮಗಳನ್ನು ರಕ್ಷಣೆ ಮಾಡಿ, ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮನೆಯಲ್ಲಿದ್ದ ಬಟ್ಟೆ, ಮಂಚ, ಸೇರಿದಂತೆ ಬೆಲೆಬಾಳುವ ವಸ್ತುಗಳು ಬೆಂಕಿಗಾಹುತಿಯಾಗಿದೆ.