ಹಾಸನ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೀಗ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಇದೀಗ ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿದ್ದು ಕೋಲಾರ ಕ್ಷೇತ್ರಕ್ಕೆ ಮಲ್ಲೇಶ ಬಾಬು ಜೆಡಿಎಸ್ ಅಭ್ಯರ್ಥಿ ಎಂದು ಘೋಷಿಸಿದ್ದಾರೆ.
ಹಾಸನದಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠರಾಗಿರುವ ಎಚ್ ಡಿ ದೇವೇಗೌಡ ಕೋಲಾರದಲ್ಲಿ ಅಭ್ಯರ್ಥಿ ಮಲ್ಲೇಶ ಬಾಬು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿದ್ದಾರೆ.
ಈ ಕುರಿದಂತೆ ಮಾತನಾಡಿದ ಅವರು ಕೋಲಾರಕ್ಕೆ ಬೇರೆಯವರ ಪ್ರಶ್ನೆಯೇ ಬರಲ್ಲ. ಮಲ್ಲೇಶ ಬಾಬು ಈ ಬಾರಿಯ ಲೋಕಸಭೆ ಚುನಾವಣೆ ಅಭ್ಯರ್ಥಿ.ಕೋಲಾರ ಕ್ಷೇತ್ರಕ್ಕೆ ಮಲ್ಲೇಶ್ ಬಾಬು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹಾಸನದಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಸ್ ಡಿ ದೇವೇಗೌಡ ಘೋಷಿಸಿದ್ದಾರೆ.