ಮೈಸೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಇದೀಗ ಮೈಸೂರಿನಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು ಮಾಜಿ ಸಚಿವ ಕೋಟೆ ಶಿವಣ್ಣ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಈ ಮೂಲಕ ಚುನಾವಣೆ ಹೊತ್ತಿನಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ.
ಹೌದು ಮೈಸೂರು ಜಿಲ್ಲೆಯಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದ್ದು, ನಾಳೆ ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಕೋಟೆ ಶಿವಣ್ಣ ಸೇರ್ಪಡೆಯಾಗಲಿದ್ದಾರೆ. ಈ ಕುರಿತಂತೆ ಮೈಸೂರು ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ವಿಜಯಕುಮಾರ್ ಮಾಹಿತಿ ನೀಡಿದ್ದಾರೆ ಎನ್ನಲಾಗುತ್ತಿದೆ.
ನಾಳೆ ಕಾಂಗ್ರೆಸ್ ಕಚೇರಿಯಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಮ್ಮುಖದಲ್ಲಿ ಸೇರ್ಪಡೆಗೊಳ್ಳಲಿದ್ದಾರೆ.ಬಿಜೆಪಿ ಸರ್ಕಾರದಲ್ಲಿ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿದ್ದರು. ಇದೀಗ ನಾಳೆ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಕೋಟೆ ಶಿವಣ್ಣ ಮರು ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.