ಬೆಂಗಳೂರು : ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ನಿರ್ವಾಹಕ ಹಾಗೂ ಮಹಿಳೆಯ ನಡುವೆ ವಾಗ್ವಾದ ನಡೆದು ಮಹಿಳೆಗೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ವಾಹಕ ಹೊನ್ನಪ್ಪನನ್ನು ಇದೀಗ ಸಿದ್ದಾಪುರ ಪೊಲೀಸ್ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.
BREAKING : ಪಂಜಾಬ್ ಮಾಜಿ ಸಿಎಂ ಬಿಯಾಂತ್ ಸಿಂಗ್ ಮೊಮ್ಮಗ, ಸಂಸದ ‘ರವ್ನೀತ್’ ಬಿಜೆಪಿಗೆ ಸೇರ್ಪಡೆ
ಇಂದು ಬೆಳಿಗ್ಗೆ 10 ಗಂಟೆಗೆಈ ಘಟನೆ ನಡೆದಿದ್ದು, ಟಿಕೆಟ್ ವಿಚಾರವಾಗಿ ಮಹಿಳೆ ಮತ್ತು ಕಂಡಕ್ಟರ್ ನಡುವೆ ಗಲಾಟೆ ನಡೆದಿದೆ , ಈ ವೇಳೆ ಕೋಪಗೊಂಡ ಕಂಡಕ್ಟರ್, ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಈ ದೃಶ್ಯಗಳು ಬಸ್ನಲ್ಲಿದ್ದ ಪ್ರಯಾಣಿಕರ ಮೊಬೈಲ್ನಲ್ಲಿ ಸೆರೆಯಾಗಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ 354A ಅಡಿ ಎಫ್ಐಆರ್ (FIR) ದಾಖಲಾಗಿದೆ.
ಮದುವೆ ಮಾಡಲು ಹೋಗಿ ಅಪ್ಪನೇ ಮದುವೆ ಆದಂತಾಗಿದೆ : ಮಂಡ್ಯದಲ್ಲಿ HDK ಸ್ಪರ್ಧೆಗೆ ಸಚಿವ ಚೆಲುವರಾಯ ಸ್ವಾಮಿ ವ್ಯಂಗ್ಯ
ಟಿಕೆಟ್ ನೀಡುವ ವಿಚಾರಕ್ಕೆ ಕಿರಿಕ್ ನಡೆದಿದೆ ಎನ್ನಲಾಗಿದ್ದು, ಮಹಿಳೆ ಹಾಗೂ ಕಂಡಕ್ಟರ್ ನಡುವೆ ವಾಗ್ವಾದ ನಡೆದಿದೆ. ಬಳಿಕ ರೊಚ್ಚಿಗೆದ್ದ ಬಿಎಂಟಿಸಿ ಬಸ್ ಕಂಡಕ್ಟರ್ ಮನಬಂದಂತೆ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸಿದ ದೃಶ್ಯ ಪ್ರಯಾಣಿಕರ ಮೊಬೈಲ್ ನಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಪೊಲೀಸರು ಕಂಡಕ್ಟರ್ ಹೊನ್ನಪ್ಪನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.