ಬೆಂಗಳೂರು : ರಾಜ್ಯದಲ್ಲಿ ಅತಂಕ ಸೃಷ್ಟಿಸಿರುವ ಮಂಗನಕಾಯಿಲೆಗೆ (ಕೆಎಫ್ ಡಿ) ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಒಬ್ಬರು ಮಂಗನಕಾಯಿಲೆಗೆ ಬಲಿಯಾಗಿದ್ದು, ವಿವರ ಬಹಿರಂಗವಾಗಿಲ್ಲ. ಈ ಸಾವಿನೊಂದಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನಕಾಯಿಲೆಗೆ ಬಲಿಯಾದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಪಂಚಾಯಿತಿ ವ್ಯಾಪ್ತಿಯ ರತ್ನ ಎಂಬುವರು ಸೋಮವಾರ ಸಂಜೆ ಮೃತಪಟ್ಟಿದ್ದಾರೆ. ಈ ಮೂಲಕ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನಕಾಯಿಲೆಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.