ಬೆಂಗಳೂರು : ಲೋಕಸಭೆ ಚುನಾವಣೆಯ ಕಾವು ನಾಳೆಯಿಂದ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಧಿಸೂಚನೆ ಪ್ರಕಟವಾಗಲಿದೆ.
ಲೋಕಸಭಾ ಸಾರ್ವತ್ರಿಕ ಚುನಾವಣೆಯು ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಆ ದಿಸೆಯಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮಾರ್ಚ್, 28 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಅಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ.
ನಾಮಪತ್ರ ಸಲ್ಲಿಸಲು ಏಪ್ರಿಲ್, 04 ಕೊನೆಯ ದಿನವಾಗಿದೆ. ಏಪ್ರಿಲ್, 05 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ಏಪ್ರಿಲ್, 08 ರಂದು ನಾಮಪತ್ರ ವಾಪಸ್ಸು ಪಡೆಯಲು ಕಡೆಯ ದಿನವಾಗಿದೆ. ಏಪ್ರಿಲ್, 26 ರಂದು ಮತದಾನ ನಡೆಯಲಿದ್ದು, ಜೂನ್, 04 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ
ಉಡುಪಿ-ಚಿಕ್ಕಮಗಳೂರು
ಹಾಸನ
ದಕ್ಷಿಣ ಕನ್ನಡ
ಚಿತ್ರದುರ್ಗ
ತುಮಕೂರು
ಮಂಡ್ಯ
ಮೈಸೂರು
ಚಾಮರಾಜನಗರ
ಬೆಂಗಳೂರು ಗ್ರಾಮಾಂತರ
ಬೆಂಗಳೂರು ಉತ್ತರ
ಬೆಂಗಳೂರು ದಕ್ಷಿಣ
ಚಿಕ್ಕಬಳ್ಳಾಪುರ
ಕೋಲಾರ
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಖಾತರಿಪಡಿಸಿಕೊಳ್ಳುವುದು, ಮತಗಟ್ಟೆ ಬಗ್ಗೆ ಮಾಹಿತಿ ಪಡೆಯುವುದು ಇತರೆ ಚುನಾವಣೆ ವಿಷಯಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು/ ಮಾಹಿತಿಯನ್ನು ಪಡೆಯಲು ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಟೋಲ್ ಫ್ರೀ ಸಂಖ್ಯೆ 1950 ಕ್ಕೆ ಕರೆ ಮಾಡಬಹುದಾಗಿದೆ. ಹಾಗೆಯೇ ವೋಟರ್ ಸಹಾಯವಾಣಿ 24*7 ಕಾರ್ಯನಿರ್ವಹಿಸಲಾಗುತ್ತದೆ.
ಚುನಾವಣಾ ಆಯೋಗದ ಸೂಚನೆಯಂತೆ ಪ್ರತಿ ಮತಗಟ್ಟೆಗಳಿಗೆ ಒಬ್ಬರು ಅಧ್ಯಕ್ಷಾಧಿಕಾರಿ ಮತ್ತು ಮೂವರು ಮತಗಟ್ಟೆ ಅಧಿಕಾರಿಗಳು ಹಾಗೂ ಮೀಸಲು ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತದೆ. ಅದೇ ರೀತಿ ಕೇಂದ್ರ ಸರ್ಕಾರಿ ಅಧಿಕಾರಿ/ ಸಿಬ್ಬಂದಿಗಳನ್ನು ಆಯ್ದ ಮತಗಟ್ಟೆಗಳಿಗೆ ಮೈಕ್ರೋ ವೀಕ್ಷಕರನ್ನಾಗಿ ನೇಮಕ ಮಾಡಲಾಗುತ್ತದೆ.
ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಹಾಗೂ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ನಿಗಾ ಇಡಲು ಸೆಕ್ಟರ್ ಅಧಿಕಾರಿಗಳು ಪ್ರೈಯಿಂಗ್ ಸ್ಕ್ವಾಡ್, ಲೆಕ್ಕ ವೀಕ್ಷಕರ ತಂಡ, ವಿಡಿಯೋ ವಿವಿಂಗ್ ತಂಡ, ವಿಡಿಯೋ ಪರಿಶೀಲನಾ ತಂಡ, ಸಹಾಯಕ ವೆಚ್ಚ ವೀಕ್ಷಕರ ತಂಡಗಳನ್ನು ರಚಿಸಲಾಗಿದೆ.
ನಾಳೆಯಿಂದ ಈ ೧೪ ಲೋಕಸಭಾ ಕ್ಷೇತ್ರಗಳಲ್ಲಿ ‘ನಾಮಪತ್ರ’ ಸಲ್ಲಿಕೆ ಆರಂಭ