ಬೆಂಗಳೂರು: ನಗರದ ರೇಸ್ ಕೋರ್ಸ್ ರಸ್ತೆಯಲ್ಲಿ ಪಾರಿವಾಳಗಳಿಗೆ ಆಹಾರ ಹಾಕಿದರೆ ರೂ 200 ದಂಡ ಹಾಕಲಾಗುತ್ತೆ ಎಂದು ಬೋರ್ಡ್ ಹಾಕಲಾಗಿದ್ದು, ಈಗ ಇದು ವಿವಾದಕ್ಕೆ ಕಾರಣವಾಗಿದೆ. ಆದರೆ ಪಾರಿವಾಳವು ಮಾನವರರಲ್ಲಿ ಆಸ್ತಮ ಹೆಚ್ಚಳ ಮಾಡುವುದಕ್ಕೆ ಪ್ರಮುಖ ಕಾರಣವಾಗಿರುವ ಹಿನ್ನಲೆಯಲ್ಲಿ ಈ ಕ್ರಮಕ್ಕೆ ಪಾಲಿಕೆ ಮುಂದಾಗಿದೆ ಎನ್ನಲಾಗಿದೆ.
ಪಾರಿವಾಳಗಳ ಹಾಟ್ ಸ್ಪಾಟ್ಗಳಾದ ರೇಸ್ ಕೋರ್ಸ್ ರೋಡ್, ಕಬ್ಬನ್ ಪಾರ್ಕ್, ಸ್ಯಾಂಕಿ ಟ್ಯಾಂಕಿ ರಸ್ತೆಗಳಲ್ಲಿ ಈ ನಾಮಫಲಕಗಳನ್ನು ಹಾಕಲಾಗಿದೆ.