ಬೆಂಗಳೂರು: ಲೋಕಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ (BJP)ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ (Tejaswini Gowda) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನ್ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರಿಗೆ ರಾಜೀನಾಮೆ ಪತ್ರ ಸಲ್ಲಿದ್ದು, ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಅವರು ಹೇಳಿದ್ದಾರೆ.
ತೇಜಸ್ವಿನಿ ಗೌಡ ಅವರ ಪರಿಷತ್ ಸದಸ್ಯ ಸ್ಥಾನದ ಅವಧಿ ಜೂನ್ 24ರ ತನಕ ಇತ್ತು ಎನ್ನಲಾಗಿದೆ. ಮಾಜಿ ಪ್ರಧಾನಿ ದೇವೇಗೌಡರನ್ನು ಸೋಲಿಸಿದ್ದ ಹೆಸರು ತೇಜಸ್ವಿನಿ ಗೌಡ ಅವರಿಗಿದೆ. ಇದಲ್ಲದೇ ಪತ್ರಕರ್ತೆಯಾಗಿರುವ ಅವರು ತಮ್ಮ ಮಾತಿನಿಂದಲೇ ಎರಡು ದಶಕಗಳ ಹಿಂದೆಯೇ ರಾಜಕಾರಣಕ್ಕೆ ಪ್ರವೇಶ ಮಾಡಿದ್ದರು, ಇದಲ್ಲದೇ ಈಗ ಸದ್ಯ ಅವರು ಕಾಂಗ್ರೆಸ್ಗೆ ಸೇರಲಿದ್ದಾರೆ ಎನ್ನಲಾಗುತ್ತಿದೆ.