ನವದೆಹಲಿ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ವಿಜಯನ್, ಅವರ ಐಟಿ ಕಂಪನಿ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯವು ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಏಜೆನ್ಸಿ ಪ್ರಕರಣ ದಾಖಲಿಸಿದೆ ಮತ್ತು ಭಾಗಿಯಾಗಿರುವ ಜನರನ್ನು ಕರೆಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಗಂಭೀರ ವಂಚನೆ ತನಿಖಾ ಕಚೇರಿ (ಎಸ್ಎಫ್ಐಒ) ಸಲ್ಲಿಸಿದ ದೂರನ್ನು ಪರಿಗಣಿಸಿದ ನಂತರ ಕೇಂದ್ರ ಸಂಸ್ಥೆ ವಿಜಯನ್ ವಿರುದ್ಧ ಪ್ರಕರಣ ದಾಖಲಿಸಿದೆ. ಕೊಚ್ಚಿನ್ ಮಿನರಲ್ಸ್ ಅಂಡ್ ರುಟೈಲ್ ಲಿಮಿಟೆಡ್ (ಸಿಎಂಆರ್ಎಲ್) ಎಂಬ ಖಾಸಗಿ ಕಂಪನಿಯು 2018 ರಿಂದ 2019 ರ ಅವಧಿಯಲ್ಲಿ ವೀಣಾ ಅವರ ಕಂಪನಿಯಾದ ಎಕ್ಸಾಲಾಜಿಕ್ ಸೊಲ್ಯೂಷನ್ಸ್ಗೆ 1.72 ಕೋಟಿ ರೂ.ಗಳನ್ನು ಅಕ್ರಮವಾಗಿ ಪಾವತಿಸಿದೆ ಎಂದು ಆರೋಪಿಸಿ ಆದಾಯ ತೆರಿಗೆ ಇಲಾಖೆ ತನಿಖೆಯಿಂದ ಕೇರಳ ಸಿಎಂ ಪುತ್ರಿಯ ವಿರುದ್ಧ ಪ್ರಕರಣ ದಾಖಲಾಗಿದೆ.