ಉತ್ತರ ಕನ್ನಡ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇಂದು ಭಟ್ಕಳದ ಶಂಕಿತ ಆರೋಪಿಯ ನಿವಾಸದ ಮೇಲೆ ದಾಳಿಯನ್ನು ನಡೆಸಿದ್ದಾರೆ.
ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಕೆಲ ದಿನಗಳ ಹಿಂದೆ ಬಾಂಬ್ ಸ್ಪೋಟಗೊಂಡಿತ್ತು. ಕೆಲವೇ ನಿಮಿಷಗಳಲ್ಲಿ ಎರಡು ಬಾರಿ ಬಾಂಬ್ ಸ್ಪೋಟ ಆಗಿದ್ದರ ಪರಿಣಾಮ, 9 ಮಂದಿ ಗಾಯಗೊಂಡಿದ್ದರು. ಗುಣಮುಖರಾಗಿ ಆಸ್ಪತ್ರೆಯಿಂದಲೂ ಡಿಸ್ಚಾರ್ಜ್ ಆಗಿದ್ದಾರೆ.
ಈ ರಾಮೇಶ್ವರ ಬಾಂಬ್ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರ ಎನ್ಐಎ ತನಿಖೆಗೆ ವಹಿಸಲಾಗಿತ್ತು. ತನಿಖೆ ವಹಿಸಿಕೊಂಡಂತ ಅಧಿಕಾರಿಗಳು ಕೆಲ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದೀಗ ರಾಮೇಶ್ವರಂ ಕೆಫೆ ಸ್ಪೋಟಕ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಶಂಕಿತ ಉಗ್ರ ಇಕ್ಬಾಲ್ ಭಟ್ಕಳ್ ಪುತ್ರ ಅಬ್ದುಲ್ ರಬಿ ನಿವಾಸದ ಮೇಲೆ ಎನ್ಐಎ ಅಧಿಕಾರಿಗಳ ದಾಳಿ ನಡೆಸಿದ್ದಾರೆ.
ರಾಮೇಶ್ವರಂ ಕೆಫೆ ಸ್ಪೋಟಕದ ಶಂಕಿತ ವ್ಯಕ್ತಿ ಹಾಗೂ ಅಬ್ದುಲ್ ರಬಿ ಹೋಲಿಕೆ ಒಂದೇ ಆಗಿದ್ದರಿಂದ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಬೆಂಗಳೂರಿನ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬಳಿಕ ಅಬ್ದುಲ್ ರಬಿಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಲೋಕಸಭಾ ಚುನಾವಣೆ: ನಾಳೆಯಿಂದ ಬೆಂಗಳೂರಿನ ಈ ಸ್ಥಳಗಳಲ್ಲಿ ‘ನಾಮಪತ್ರ’ ಸ್ವೀಕಾರ
ಕರ್ನಾಟಕದಲ್ಲಿ ಭಯದಿಂದ ಬಿಜೆಪಿ-ಜೆಡಿಎಸ್ ಒಂದಾಗಿದೆ, ಇವರನ್ನು ಜನತೆ ಸೋಲಿಸಬೇಕು- ಸಿಎಂ ಸಿದ್ದರಾಮಯ್ಯ ಕರೆ