ಬಳ್ಳಾರಿ: ನಾಳೆ ಬಳ್ಳಾರಿ ಪಾಲಿಕೆಯ ಮೇಯರ್ ಆಯ್ಕೆಗಾಗಿ ಚುನಾವಣೆ ನಿಗದಿ ಪಡಿಸಲಾಗಿತ್ತು. ಇಂತಹ ಮೇಯರ್ ಚುನಾವಣೆಯನ್ನು ಮುಂದೂಡಿಕೆ ಮಾಡಲಾಗಿದೆ.
ಈ ಸಂಬಂಧ ಕಲಬುರ್ಗಿ ಪ್ರಾದೇಶಕ ಆಯುಕ್ತರು ಆದೇಶ ಹೊರಡಿಸಿದ್ದು, ನಾಳೆ ನಡೆಯಬೇಕಿದ್ದಂತ ಬಳ್ಳಾರಿ ಮೇಯರ್ ಚುನಾವಣೆಯನ್ನು ಮುಂದೂಡಿಕೆ ಮಾಡಿರೋದಾಗಿ ತಿಳಿಸಿದ್ದಾರೆ.
ಮಾ.28ರ ನಾಳೆ 23ನೇ ಬಳ್ಳಾರಿ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗಾಗಿ ಚುನಾವಣೆ ನಿಗದಿಯಾಗಿತ್ತು. ಕಲಬುರಗಿ ವಿಭಾದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ 28ರಂದು ಚುನಾವಣೆ ನಡೆಯಲಿದೆ. ಆ ದಿನ ಬೆಳಗ್ಗೆ 10.30ರ ಒಳಗಾಗಿ ನಾಮಪತ್ರ ಸಲ್ಲಿಸಲು ಅವಕಾಶವಿರಲಿದೆ. ನಾಮಪತ್ರ ಪರಿಶೀಲನೆ, ಹಿಂತೆಗೆತ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮಧ್ಯಾಹ್ನ 12.30ಕ್ಕೆ ಚುನಾವಣೆ ನಡೆಸಲು ನಿರ್ಧರಿಸಲಾಗಿತ್ತು.
ಇದರ ನಂತರ ಉಪ ಮೇಯರ್ ಹಾಗೂ ಸ್ಥಾಯಿ ಸಮಿತಿ ಸದಸ್ಯ ಸ್ಥಾನಗಳಿಗೂ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ.
ಸದ್ಯ 39 ಸದಸ್ಯಬಲದ ಪಾಲಿಕೆಯಲ್ಲಿ ಕಾಂಗ್ರೆಸ್ 21 , ಬಿಜೆಪಿ 13 ಸದಸ್ಯರನ್ನು ಹೊಂದಿದೆ. ಪಕ್ಷೇತರರಾಗಿ ಆಯ್ಕೆಯಾಗಿದ್ದ 5 ಸದಸ್ಯರೂ ಕಾಂಗ್ರೆಸ್ ಸೇರಿದ್ದು, ಅದರ ಬಲ 26ಕ್ಕೆ ಏರಿದೆ.
ಇದರ ಜತೆಗೆ ಪಾಲಿಕೆ ವ್ಯಾಪ್ತಿಯ ವಿಧಾನಸಭಾ ಸದಸ್ಯರಾದ ಭರತ್ ರೆಡ್ಡಿ, ಸಚಿವ ಬಿ. ನಾಗೇಂದ್ರ, ಲೋಕಸಭಾ ಸದಸ್ಯ ದೇವೇಂದ್ರಪ್ಪ, ರಾಜ್ಯಸಭಾ ಸದಸ್ಯ ಸೈಯದ್ ನಾಸಿರ್ ಹುಸೇನ್, ಪರಿಷತ್ ಬಿಜೆಪಿ ಸದಸ್ಯ ವೈ. ಎಂ ಸತೀಶ್ ಮೇಯರ್ ಚುನಾವಣೆಯಲ್ಲಿ ಮತಚಲಾಯಿಸೋದಕ್ಕೆ ರೆಡಿಯಾಗಿದ್ದರು.
ಮೂವರು ಆಕಾಂಕ್ಷಿಗಳು
ಸದ್ಯ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ನಂದೀಶ್, ಗಾದೆಪ್ಪ, ಪ್ರಬಂಜನ್ ಅವರ ಹೆಸರುಗಳು ಪ್ರಬಲವಾಗಿ ಕೇಳಿ ಬರುತ್ತಿವೆ. ಆದ್ರೇ ಇದೀಗ ನಾಳೆ ನಿಗದಿಯಾಗಿದ್ದಂತ ಬಳ್ಳಾರಿ ಮೇಯರ್, ಉಪ ಮೇಯರ್ ಆಯ್ಕೆಯ ಚುನಾವಣೆ ಮುಂದೂಡಿಕೆ ಮಾಡಲಾಗಿದೆ.
ರಾಮಾಂಜನೇಯರ ನಡುವೆಯೇ ಯುದ್ಧವಾಗಿದೆ; ಹುಲು ಮಾನಾವರು, ನಾವೆಷ್ಟು?-HDK ಪ್ರಶ್ನೆ
ಕರ್ನಾಟಕದಲ್ಲಿ ಭಯದಿಂದ ಬಿಜೆಪಿ-ಜೆಡಿಎಸ್ ಒಂದಾಗಿದೆ, ಇವರನ್ನು ಜನತೆ ಸೋಲಿಸಬೇಕು- ಸಿಎಂ ಸಿದ್ದರಾಮಯ್ಯ ಕರೆ