ನವದೆಹಲಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಮೊದಲ ಪ್ರಗತಿಯಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮೂರು ರಾಜ್ಯಗಳ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಪ್ರಮುಖ ಸಂಚುಕೋರನನ್ನು ಬಂಧಿಸಿದೆ.
ಮುಜಮ್ಮಿಲ್ ಶರೀಫ್ ನನ್ನು ಸಹ ಸಂಚುಕೋರನಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಎನ್ ಐಎ ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಇತರ ಇಬ್ಬರು ಆರೋಪಿಗಳಾದ ಮುಸಾವಿರ್ ಶಜೀಬ್ ಹುಸೇನ್ ಮತ್ತು ಅಬ್ದುಲ್ ಮತೀನ್ ತಾಹಾ ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಐಇಡಿ ಸ್ಫೋಟದ ಇತರ ಇಬ್ಬರು ಆರೋಪಿಗಳಿಗೆ ಶರೀಫ್ ಲಾಜಿಸ್ಟಿಕ್ ಬೆಂಬಲವನ್ನು ನೀಡಿದ್ದಾನೆ ಎಂದು ತಿಳಿದುಬಂದಿದೆ.
#JUSTIN:The National Investigation Agency has arrested a key conspirator,Muzammil Shareef in connection with Rameshwaram Cafe blast conspiracy. Two main accused are still absconding: NIA. @IndianExpress
— Mahender Singh Manral (@mahendermanral) March 28, 2024