ಚಿತ್ರದುರ್ಗ: ವಿರೋಧದ ನಡುವೆಯೂ ಕೋಟೆನಾಡು ಚಿತ್ರದುರ್ಗಕ್ಕೆ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಎಂಟ್ರಿಕೊಟ್ಟಿದ್ದಾರೆ. ಮೊದಲ ಎಂಟ್ರಿಯಲ್ಲೇ ಅವರಿಗೆ ಬಂಡಾಯದ ಬಿಸಿ ತಟ್ಟಿದೆ. ಅಲ್ಲದೇ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಕಾರಿಗೆ ಮುತ್ತಿಗೆ ಹಾಕಿ ಗೋ ಬ್ಯಾಕ್ ಗೋ ಬ್ಯಾಕ್ ಘೋಷಣೆ ಕೂಗಲಾಗಿದೆ.
ಹೌದು.. ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಬಂಡಾಯದ ಬಿಸಿ ತಟ್ಟಿದೆ. ಟಿಕೆಟ್ ವಂಚಿತ ನಾಯಕನ ಕಾರ್ಯಕರ್ತರು ಗೋ ಬ್ಯಾಕ್ ಗೋವಿಂದ ಕಾರಜೋಳ ಗೋ ಬ್ಯಾಕ್ ಗೋವಿಂದ ಕಾರಜೋಳ ಎಂದು ಭಿತ್ತಿ ಚಿತ್ರ ಹಿಡಿದು ಅಭ್ಯರ್ಥಿ ಕಾರಿಗೆ ಮುತ್ತಿಗೆ ಹಾಕಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗದ ಚಳ್ಳಕೆರೆ ಗೇಟ್ ನಲ್ಲಿ ಅವರ ಕಾರು ಅಡ್ಡಗಟ್ಟಿದಂತ ರಘುಚಂದನ್ ಅವರ ಬೆಂಬಲಿಗರು, ಅವರ ವಿರುದ್ಧ ಘೋಷಣೆ ಕೂಗಿದರು. ಗೋ ಬ್ಯಾಕ್ ಗೋವಿಂದ ಕಾರಗೋಜ್, ಗೋ ಬ್ಯಾಕ್ ಗೋವಿಂದ ಕಾರಜೋಳ್ ಎಂಬುದಾಗಿ ಘೋಷಣೆ ಕೂಗಿದರು.
ಗೋವಿಂದ ಕಾರಜೋಳ ಅವರ ವಿರುದ್ಧ ಪ್ರತಿಭಟನೆ ನಡೆಸಿದಂತ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು. ಗೋವಿಂದ ಕಾರಜೋಳ್ ಅವರ ಕಾರು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದಂತ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಈ ಬಳಿಕ ಗೋವಿಂದ ಕಾರಜೋಳ ಅವರು ಚಿತ್ರದುರ್ಗ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡುವಂತೆ ಆಯ್ತು.
ಲೋಕಸಭಾ ಚುನಾವಣೆ: ಮಂಡ್ಯದಲ್ಲಿ ‘ಸುಮಲತಾ’ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ?
BIG NEWS : ಅಶ್ಲೀಲ ಪದಗಳಿಂದ ಸಚಿವ ಶಿವರಾಜ್ ತಂಗಡಗಿಗೆ ನಿಂದನೆ ಆರೋಪ : ಸಿಟಿ ರವಿ ವಿರುದ್ಧ ದೂರು ದಾಖಲು