ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಮಾರ್ಚ್ 30) ಇಬ್ಬರು ಮಾಜಿ ಪ್ರಧಾನ ಮಂತ್ರಿಗಳು (ಮರಣೋತ್ತರ) ಮತ್ತು ಹಿರಿಯ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಎಲ್.ಕೆ.ಅಡ್ವಾಣಿ ಸೇರಿದಂತೆ ಐದು ಗಣ್ಯ ವ್ಯಕ್ತಿಗಳಿಗೆ ಭಾರತ ರತ್ನವನ್ನು ಪ್ರದಾನ ಮಾಡಲಿದ್ದಾರೆ.
ಮಾಜಿ ಉಪ ಪ್ರಧಾನಿ ಎಲ್.ಕೆ.ಆಡ್ವಾಣಿ ಹೊರತುಪಡಿಸಿ, ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್ ಮತ್ತು ಪಿ.ವಿ.ನರಸಿಂಹ ರಾವ್, ಖ್ಯಾತ ಕೃಷಿ ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡಲಾಗುವುದು.
President has been pleased to award Bharat Ratna to the following eminent persons:
1. P.V. Narasimha Rao (posthumously)
2. Chaudhary Charan Singh (posthumously)
3. Dr. M. S. Swaminathan (posthumously)
Read here: https://t.co/KxVjPmPWHb#BharatRatna pic.twitter.com/0LdVqjaXry
— PIB India (@PIB_India) February 9, 2024
ಮೋದಿ ಸರ್ಕಾರದ ಅವಧಿಯಲ್ಲಿ ಮೊದಲ ಬಾರಿಗೆ ಒಂದೇ ವರ್ಷದಲ್ಲಿ ಐದು ಭಾರತ ರತ್ನ ಪ್ರಶಸ್ತಿ ಘೋಷಿಸಲಾಗಿದೆ. ಇಲ್ಲಿದೆ ಪುರಸ್ಕೃತರ ಪಟ್ಟಿ : ನರಸಿಂಹ ರಾವ್, ಚರಣ್ ಸಿಂಗ್, ಎಂ.ಎಸ್.ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ.