ಬೆಂಗಳೂರು : ರಾಜ್ಯದ ಜನರು ಬಿಸಿಲ ಬೇಗೆಗೆ ಹೈರಾಣಾಗಿದ್ದಾರೆ. ಸುಡುವ ಬಿಸಿಲು, ಬಿಸಿ ಗಾಳಿ, ವಿಪರೀತ ಸೆಕೆಯನ್ನು ಸಹಿಸಿಕೊಳ್ಳುವುದು ಕಷ್ಟ ಎನ್ನುವಂತಾಗಿದೆ. ಈ ಸಮಯದಲ್ಲಿ ಜನರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ರೇಡಿಯೊ, ದೂರದರ್ಶನ ಅಥವಾ ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನದ ಮಾಹಿತಿ ಪಡೆದು, ಅದರಂತೆ ದೈನಂದಿನ ಚಟುವಟಿಕೆ ಯೋಜಿಸಿಕೊಳ್ಳಿ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಬಿಸಿಲ ಬೇಗೆಗೆ ದೇಹದ ಬಗೆಗಿರಲಿ ವಿಶೇಷ ಕಾಳಜಿ
• ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಬಿಸಿಲಲ್ಲಿ ಹೆಚ್ಚು ಓಡಾಡದಿರಿ.
. ಚಹಾ, ಕಾಫಿ, ಟೀ ಸೇವನೆ ಕಡಿಮೆ ಮಾಡಿ.
ಮಕ್ಕಳು ಹೆಚ್ಚು ಬಿಸಿಲಿನಲ್ಲಿ ಆಟವಾಡದಂತೆ ಪೋಷಕರು ಜಾಗೃತಿ ವಹಿಸಿ.
• ರೇಡಿಯೊ, ದೂರದರ್ಶನ ಅಥವಾ ದಿನಪತ್ರಿಕೆಗಳ ಮೂಲಕ ಸ್ಥಳೀಯ ಹವಾಮಾನದ ಮಾಹಿತಿ ಪಡೆದು, ಅದರಂತೆ ದೈನಂದಿನ ಚಟುವಟಿಕೆ ಯೋಜಿಸಿಕೊಳ್ಳಿ.