ಬೆಂಗಳೂರು : ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಇದೀಗ ಸುಮಲತಾ ಅವರು ಇಂದು ಬೆಂಗಳೂರಿನಲ್ಲಿ ಬೆಂಬಲಿಗರ ಜೊತೆ ಪ್ರಮುಖವಾದಂತಹ ಸಭೆ ನಡೆಸಲಿದ್ದು, ಸಭೆಯಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆ ಇದೆ.ಹಾಗಾಗಿ ಸಂಸದ ಸುಮಲತಾ ಅವರ ಮುಂದಿನ ನಡೆ ತೀವ್ರ ಕುತೂಹಲ ಮೂಡಿಸಿದೆ.
ತಟಸ್ಥವಾಗಿರಿ ಇಲ್ಲವೇ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸಿ : ಸುಮಲತಾ ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಎಚ್ಚರಿಕೆ
ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಕಣಕ್ಕೆ ಇಳಿಯುವ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದ್ದು, ಮಧ್ಯಾಹ್ನ 2:30ಕ್ಕೆ ಬೆಂಬಲಿಗರ ಜೊತೆ ಸುಮಲತಾ ಸಭೆ ನಡೆಸಲಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಬಿಜೆಪಿ ಜೆಡಿಎಸ್ ದೋಸ್ತಿಗೆ ಶಾಕ್ ನೀಡಲಿದ್ದಾರ ಎಂದು ಕಾದು ನೋಡಬೇಕಿದೆ.
ಮಾಸ್ಕೋ ದಾಳಿಗೆ ಕೆಲವು ದಿನಗಳ ಮೊದಲು ಐಸಿಸ್ ಬೆದರಿಕೆಯ ಬಗ್ಗೆ ರಷ್ಯಾದ ಗುಪ್ತಚರರಿಗೆ ತಿಳಿದಿತ್ತು: ವರದಿ
ಸುಮಲತಾ ಈ ಮೂಲಕ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುತ್ತಾರ ಎಂದು ಕಾದು ನೋಡಬೇಕಿದೆ.ಮಂಡ್ಯದಿಂದ ಸುಮಲತಾ ಬೆಂಬಲಿಗರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಸುಮಲದ ಮಂಡ್ಯ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಇಂದು ಮಂಡ್ಯ ಗೌಡ್ತಿ ಹೈ ವೋಲ್ಟೇಜ್ ಮೀಟಿಂಗ್ ನಡೆಯಲಿದೆ.
ಮುಂದಿನ ರಾಜಕೀಯ ನಡೆಯ ಬಗ್ಗೆ ಕಮಲತಾ ಅವರು ಬೆಂಬಲಿಗರ ಅಭಿಪ್ರಾಯವನ್ನು ಸಂಗ್ರಹಿಸಲಿದ್ದಾರೆ ಈ ಹಿನ್ನೆಲೆಯಲ್ಲಿ ಸಂಸದ ಸುಮಲತಾ ಅವರ ನಡೆ ತೀವ್ರ ಕುತೂಹಲವನ್ನು ಮೂಡಿಸಿದೆ.ಮಂಡ್ಯ ಬಿಟ್ಟು ಬೇರೆ ಎಲ್ಲೂ ಕೂಡ ಸ್ಪಂದಿಸುವುದಿಲ್ಲ ಎಂದು ಈ ಹಿಂದೆ ಸುಮಲತಾ ಅವರು ತಿಳಿಸಿದರು. ಇದೀಗ ಸಭೆ ಬೆಳಕ ಅವರು ಯಾವ ರೀತಿ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಕಾದು ನೋಡಬೇಕಿದೆ.