ಕಲಬುರಗಿ : ಕಲಬುರಗಿಯ ಆರಾಧ್ಯ ದೈವರಾದ ಶ್ರೀ ಶರಣಬಸವೇಶ್ವರರ ಮಹೋತ್ಸವದ ಅಂಗವಾಗಿ ನಿನ್ನೆ ನಡೆದ ಉಚ್ಛಾಯಿ (ಚಿಕ್ಕ ರಥೋತ್ಸವ) ಎಳೆಯುವ ವೇಳೆ ದುರಂತವೊಂದು ಸಂಭವಿಸಿದ್ದು ಓರ್ವ ಭದ್ರತಾ ಸಿಬ್ಬಂದಿ ಸಾವನಪ್ಪಿದ್ದು ಇನ್ನೊರ್ವ ಸಿಬ್ಬಂದಿಗೆ ಗಾಯಗಳಾಗಿರುವ ಘಟನೆ ನಡೆದಿದೆ.
ಕೋಲಾರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಫೈನಲ್: ಕೆ. ಗೌತಮ್ ಹೆಸರು ಅಂತಿಮ!
ನಿನ್ನೆ ಕಲಬುರ್ಗಿ ನಗರದಲ್ಲಿ ಶ್ರೀ ಶರಣಬಸವೇಶ್ವರರ 202ನೇ ಜಾತ್ರಾ ಮಹೋತ್ಸವದ ಅಂಗವಾಗಿ ಉಚ್ಛಾಯಿ ಎಳೆಯಲಾಗುತ್ತಿತ್ತು ಈ ವೇಳೆ ರಥದ ಚಕ್ರಕ್ಕೆ ಸಿಲುಕಿ ಓರ್ವ ಗೃಹರಕ್ಷಕ ದಳದ ಸಿಬ್ಬಂದಿ ಮೃತಪಟ್ಟಿದ್ದು, ಇನ್ನೋರ್ವ ಗಾಯಗೊಂಡಿದ್ದಾರೆ. ಮೃತರನ್ನು ಚಿಟಗುಪ್ಪಾ ತಾಲ್ಲೂಕಿನ ಇಟಗಾ ಗ್ರಾಮದ ನಿವಾಸಿ ರಾಮು ವಾಲಿ ಎಂದು ಗುರುತಿಸಲಾಗಿದೆ.ಬೀದರ್ ಜಿಲ್ಲೆಯ ಚಿಟಗುಪ್ಪಾ ಘಟಕದ ಗೃಹ ರಕ್ಷಕ ದಳದ ಸಿಬ್ಬಂದಿ ಅಶೋಕರೆಡ್ಡಿ ಗಾಯಗೊಂಡ ವ್ಯಕ್ತಿಯಾಗಿದ್ದಾರೆ ಎಂದು ಹೇಳಲಗುತ್ತಿದೆ.
ಇಂದು ಬೆಂಬಲಿಗರ ಜೊತೆ ಸುಮಲತಾ ಹೈ ವೋಲ್ಟೇಜ್ ಸಭೆ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರ ಮಂಡ್ಯ ಗೌಡ್ತಿ?
ಉಚ್ಛಾಯಿಯನ್ನು ಸುಗಮವಾಗಿ ಎಳೆಯುವ ಸಲುವಾಗಿ ಸುಮಾರು 100 ಸಿಬ್ಬಂದಿಗಳನ್ನು ಭದ್ರತಾ ವ್ಯವಸ್ಥೆಗೆ ನಿಯೋಜಿಸಲಾಗಿತ್ತು. ಕಲ್ಬುರ್ಗಿ ಜಿಲ್ಲೆ ಅಷ್ಟೇ ಅಲ್ಲದೆ ಸುತ್ತಮುತ್ತಲಿನ ಕೊಪ್ಪಳ ಯಾದಗಿರಿ ಬಳ್ಳಾರಿ ಸೇರಿದಂತೆ ಅನೇಕ ಜಿಲ್ಲೆಗಳಿಂದ ಈ ಒಂದು ಶರಣಬಸವೇಶ್ವರ ರಥೋತ್ಸವ ಕಣ್ತುಂಬಿಕೊಳ್ಳಲು ಭಕ್ತ ಸಾಗರವೇ ಹರಿದು ಬರುತ್ತದೆ.
ತಟಸ್ಥವಾಗಿರಿ ಇಲ್ಲವೇ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸಿ : ಸುಮಲತಾ ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಎಚ್ಚರಿಕೆ
ಬಹುಸಂಖ್ಯೆಯಲ್ಲಿ ಆಗಮಿಸಿದ ಭಕ್ತರನ್ನು ಬದಿಗೆ ಸರಿಸುತ್ತ ಹೋಗುವಾಗ ಮಾರ್ಗ ಮಧ್ಯದಲ್ಲಿ ರಾಮು ವಾಲಿ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಆತನ ಮೇಲೆ ಉಚ್ಛಾಯಿ ಚಕ್ರಗಳು ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ರಾಮುನನ್ನು ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟದ್ದಾರೆ. ಮತ್ತೊಂದೆಡೆ ಅದೇ ಉಚ್ಛಾಯಿ ಚಕ್ರಕ್ಕೆ ಅಶೋಕ ರೆಡ್ಡಿ ಅವರ ಕಾಲು ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಪೊಲೀಸರು ಮಾಹಿತಿ ನೀಡಿದ್ದಾರೆ.