ಬೆಂಗಳೂರು: ಕಾಂಗ್ರೆಸ್ ಪಕ್ಷದ ಲಕ್ಷ್ಮಣ ರೇಖೆ ಯಾರೂ ದಾಟುವಂತಿಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೆಸರೇಳದೇ ರಮೇಶ್ ಕುಮಾರ್, ಕೆ.ಹೆಚ್ ಮುನಿಯಪ್ಪ ಅವರಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.
ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಎಐಸಿಸಿಗೆ ಆದಾಯ ತೆರಿಗೆ ಇಲಾಖೆಯಿಂದ ನೊಟೀಸ್ ಜಾರಿ ಮಾಡಿರುವ ಬಗ್ಗೆ ಕೇಳಿದಾಗ ಅವರು ಶನಿವಾರ ಉತ್ತರಿಸಿದ ಅವರು, ಕೋಲಾರದ ಅಭ್ಯರ್ಥಿ ಘೋಷಣೆಯಾಗಿರುವ ಬಗ್ಗೆ ಕೇಳಿದಾಗ, “ನಾನು ಮುನಿಯಪ್ಪ, ಬೇರೆ ನಾಯಕರ ಜತೆ ಚರ್ಚೆ ಮಾಡಿದ್ದು, ಎಲ್ಲರೂ ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಲ್ಲಿ ಗುಂಪು ರಾಜಕೀಯಕ್ಕೆ ಅವಕಾಶವಿಲ್ಲ. ಶಿಸ್ತು ಇಲ್ಲಿ ಬಹಳ ಮುಖ್ಯ. ಯಾವುದೇ ಸಚಿವರು, ಶಾಸಕರು ಪಕ್ಷದ ಲಕ್ಷ್ಮಣ ರೇಖೆ ದಾಟಲು ಸಾಧ್ಯವಿಲ್ಲ ಎಂದು ಹೇಳಿದ್ದೇವೆ. ಗೆಲ್ಲುವುದು ಬಿಡುವುದು ಬೇರೆ ವಿಚಾರ. ಪಕ್ಷದಲ್ಲಿ ಶಿಸ್ತು ಕಾಪಾಡಿ ರಾಜ್ಯ ಹಾಗೂ ಪಕ್ಷದ ಹಿತಕ್ಕೆ ಕೆಲಸ ಮಾಡಬೇಕು. ವಿರೋಧ ವ್ಯಕ್ತಪಡಿಸಿದ ನಾಯಕರು ಕ್ಷಮೆ ಕೇಳಿದ್ದಾರೆ, ಮುನಿಯಪ್ಪ, ಸಚಿವ ಸುಧಾಕರ್ ಸೇರಿದಂತೆ ಇತರೆ ಶಾಸಕರು, ನಾಯಕರು ಪಕ್ಷದ ಆದೇಶ ಪಾಲಿಸಬೇಕು. ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಸಾಮಾನ್ಯ ಕಾರ್ಯಕರ್ತ, ಮಾಜಿ ಮೇಯರ್ ಪುತ್ರ ಯುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಿದ್ದು, ಎಲ್ಲರೂ ಒಟ್ಟಾಗಿ ಅವರನ್ನು ಗೆಲ್ಲಿಸಿಕೊಂಡು ಬರಬೇಕು” ಎಂದರು.
ಕೋಲಾರದಲ್ಲಿ ಗೆಲ್ಲುವ ಅವಕಾಶವಿದ್ದರೂ ಒಳಏಟು ಬೀಳುವ ಸಾಧ್ಯತೆ ಬಗ್ಗೆ ಕೇಳಿದಾಗ, “ಯಾವ ಒಳಏಟೂ ಇಲ್ಲ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಪರಿಶಿಷ್ಟ ಜಾತಿ ಬಲಪಂಥಿಯರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯ ಮಾಡಿದರು. ಅದನ್ನು ತಪ್ಪು ಎಂದು ಹೇಳುವುದಿಲ್ಲ. 10 ಕ್ಷೇತ್ರಗಳಲ್ಲಿ ಎಡಪಂಥಿಯರು ಹೆಚ್ಚಾಗಿದ್ದು, ನಾವು ರಾಜ್ಯದ ಹಿತ ನೋಡಬೇಕಿದೆ. ಎಲ್ಲವನ್ನು ಲೆಕ್ಕಾಚಾರ ಮಾಡಿ ಟಿಕೆಟ್ ನೀಡಿದ್ದೇವೆ” ಎಂದರು.
BREAKING : ಡಿಸಿಎಂ ಡಿಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ : ‘IT’ ಇಲಾಖೆಯಿಂದ ನೋಟಿಸ್ ಜಾರಿ
BREAKING : ‘NTA’ಯಿಂದ ‘NITTT’ ಫಲಿತಾಂಶ ಪ್ರಕಟ : ರಿಸಲ್ಟ್ ನೋಡಲು ನೇರ ಲಿಂಕ್ ಇಲ್ಲಿದೆ