ಹಾವೇರಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಬಸವರಾಜ ಬೊಮ್ಮಾಯಿ ಇಂದು ಹಾವೇರಿ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಇದರ ಮಧ್ಯೆಯೇ ಮಠಗಳು ಹಾಗೂ ದೇವಸ್ಥಾನಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು.
ಶನಿವಾರ ಬೆಳಿಗ್ಗೆಯಿಂದಲೇ ಪ್ರಚಾರ ಆರಂಭಿಸಿದ ಬಸವರಾಜ ಬೊಮ್ಮಾಯಿಯವರು, ಭಾರತೀಯ ಜನತಾ ಪಕ್ಷದ ಹಾವೇರಿ ಜಿಲ್ಲೆಯ ವತಿಯಿಂದ ಏರ್ಪಡಿಸಲಾದ ಹಾವೇರಿ ವಿಧಾನಸಭಾ ಮತಕ್ಷೇತ್ರದ ಗ್ರಾಮೀಣ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ನಂತರ ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದಲ್ಲಿರುವ ಪಾರ್ವತಿ ಪರಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ರೋಡ್ ಷೋ ಮಾಡುವ ಮೂಲಕ ಮತಯಾಚನೆ ಮಾಡಿದರು.
ಗುತ್ತಲ ಪಟ್ಟಣದ ಕಲ್ಮಠಕ್ಕೆ ಭೇಟಿ ನೀಡಿ ಶ್ರೀ ಗುರುಸಿದ್ದ ಮಹಾಸ್ವಾಮಿಗಳ ದರ್ಶನ ಪಡೆದು ಪ್ರಮುಖ ಬೀದಿಗಳಲ್ಲಿ ರೋಡ್ ಷೋ ಮಾಡುವ ಮೂಲಕ ಮತಯಾಚನೆಯನ್ನು ಮಾಡಿದರು. ತದನಂತರ ಹೇಮಗಿರಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಹಾವನೂರು ಗ್ರಾಮದ ಪ್ರಮುಖ ಬೀದಿಗಳಲ್ಲಿ ರೋಡ್ ಷೋ ಮಾಡುವ ಮೂಲಕ ಮತಯಾಚನೆಯನ್ನು ಮಾಡಿದರು. ಅಲ್ಲದೇ ಗ್ರಾಮದ ಆದಿ ದೇವತೆಯಾದ ಶ್ರೀ ಗ್ರಾಮದೇವಿಯ ದರ್ಶನ ಪಡೆದರು. ಇನ್ನು ಇದೇ ಸಂಧರ್ಭದಲ್ಲಿ ಗ್ರಾಮದ ಮುಸ್ಲಿಂ ಬಾಂಧವರು ಸ್ವಾಗತಿಸುವ ಮೂಲಕ ಬಸವರಾಜ ಬೊಮ್ಮಾಯಿಯವರಿಗೆ ತಮ್ಮ ಬೆಂಬಲ ಸೂಚಿಸಿದರು.
ನೆಗಳೂರು ಗ್ರಾಮದ ಪ್ರಮುಖ ಬೀದಿಗಳಲ್ಲಿ ರೋಡ್ ಷೋ ಮಾಡುವ ಮೂಲಕ ಮತಯಾಚನೆಯನ್ನು ಮಾಡಿದರು. ಇದೇ ಸಂಧರ್ಭದಲ್ಲಿ ಗ್ರಾಮದ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠ ಕ್ಕೆ ಭೇಟಿ ನೀಡಿ ಗುರುಶಾಂತೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆದುಕೊಂಡರು.
ನಂತರ ಹೊಸರಿತ್ತಿ, ಕರ್ಜಗಿ, ದೇವಗಿರಿ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು.
ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿದರು. ಹಾಗೂ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಈ ಚುನಾವಣೆಯಲ್ಲಿ ತಮಗೆ ಮತ ನೀಡಿ ಆಶಿರ್ವದಿಸುವಂತೆ ಮನವಿ ಮಾಡಿದರು.
‘ಪ್ರಧಾನಿ ಮೋದಿ’ ವಿರುದ್ಧ ಮಾಜಿ ಪರಿಷತ್ ಸದಸ್ಯ ‘ರಮೇಶ್ ಬಾಬು’ ಹಿಗ್ಗಾಮುಗ್ಗಾ ವಾಗ್ಧಾಳಿ
ಬಿಜೆಪಿ ಕಚೇರಿ ಆವರಣದಲ್ಲೇ ಇ.ಡಿ, ಸಿಬಿಐಗಳಿಗೆ ಜಾಗ ನೀಡಿ – ಮಾಜಿ MLC ರಮೇಶ್ ಬಾಬು ವಾಗ್ಧಾಳಿ