ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಂಜಲಿ ನಿಂಬಾಳ್ಕರ್ ಕಣಕ್ಕೆ ಇಳಿದಿದ್ದರು. ಅವರ ಪತಿ ಹೇಮಂತ್ ನಿಂಬಾಳ್ಕರ್ ವಾರ್ತಾ ಇಲಾಖೆಯ ಆಯುಕ್ತರಾಗಿದ್ದರು. ಇಂತಹ ಅವರು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಅಂತ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಈ ಹಿನ್ನಲೆಯಲ್ಲಿ ಅವರನ್ನು ವರ್ಗಾವಣೆ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ.
ರಾಜ್ಯದ ವಾರ್ತಾ ಇಲಾಖೆಯ ಆಯುಕ್ತರಾಗಿದ್ದಂತ ಹೇಮಂತ್ ನಿಂಬಾಳ್ಕರ್ ಅವರ ಪತ್ನಿ ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗೆ ಉತ್ತರ ಕನ್ನಡ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದರು. ಅಂಜಲಿ ನಿಂಬಾಳ್ಕರ್ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕಾರಣ, ಅವರ ಪತಿ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳಲಿದ್ದಾರೆ. ಅವರನ್ನು ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು.
ಬಿಜೆಪಿ ದೂರಿನ ಹಿನ್ನಲೆಯಲ್ಲಿ ವಾರ್ತಾ ಇಲಾಖೆಯ ಆಯುಕ್ತಾಗಿದ್ದಂತ ಹೇಮಂತ್ ನಿಂಬಾಳ್ಕರ್ ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಇಂದು ಚುನಾವಣಾ ಆಯೋಗದ ಸೂಚನೆಯ ಮೇರೆಗೆ ರಾಜ್ಯ ಸರ್ಕಾರವು ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
SSLC ಪರೀಕ್ಷೆ: ಇಂದು ‘8.41 ಲಕ್ಷ ವಿದ್ಯಾರ್ಥಿ’ಗಳು ಹಾಜರ್, ಓರ್ವ ಡಿಬಾರ್ | SSLC Exam
ಬಿಜೆಪಿ ಕಚೇರಿ ಆವರಣದಲ್ಲೇ ಇ.ಡಿ, ಸಿಬಿಐಗಳಿಗೆ ಜಾಗ ನೀಡಿ – ಮಾಜಿ MLC ರಮೇಶ್ ಬಾಬು ವಾಗ್ಧಾಳಿ