ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಡು ರಸ್ತೆಯಲ್ಲೇ ಮಹಿಳೊಯಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವಂತ ಘಟನೆ ನಡೆದಿದೆ. ಈ ಘಟನೆಯನ್ನು ಕಂಡ ಬೆಂಗಳೂರು ಜನತೆ ಬೆಚ್ಚಿ ಬಿದ್ದಿದ್ದಾರೆ.
ಬೆಂಗಳೂರಿನ ಜಯನಗರ 11ನೇ ಮುಖ್ಯ ರಸ್ತೆಯಲ್ಲಿ ಶಾಲಿನಿ ಗ್ರೌಂಡ್ ನಲ್ಲಿ ಫರೀದಾ ಖಾನ್ (42) ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರೋ ಘಟನೆ ನಡೆದಿದೆ. ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿರೋದಾಗಿ ತಿಳಿದು ಬಂದಿದೆ.
ಮಹಿಳೆಯನ್ನು ಹತ್ಯೆಗೈದ ಆರೋಪಿ ಗಿರೀಶ್ ಎಂದು ಗುರುತಿಸಲಾಗಿದ್ದು, ಮಹಿಳೆಯನ್ನು ಕೊಲೆ ಮಾಡಿದ ಬಳಿಕ ಜಯನಗರ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ ಎಂದು ವರದಿಯಾಗಿದೆ.