ಶಿವಮೊಗ್ಗ: ಜಿಲ್ಲೆಯಲ್ಲಿ ಬಿಜೆಪಿ ವಿರುದ್ಧ ಸಿಡಿದೆದ್ದು, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯೋದಾಗಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಘೋಷಣೆ ಮಾಡಿದ್ದರು. ಚುನಾವಣಾ ಪ್ರಚಾರಕ್ಕೂ ಇಳಿದಿದ್ದಾರೆ. ಹೀಗೆ ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದಂತ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಗೋಪಾಳದ ರಂಗನಾಥ ಸ್ವಾಮಿ ದೇವಾಲಯಕ್ಕೆ ತೆರಳಿದ್ದಂತ ಬಿಜೆಪಿ ಬಂಡಾಯ ನಾಯಕ ಕೆ.ಎಸ್ ಈಶ್ವಪರ್ಪ ಅವರು, ಅಲ್ಲಿಯೇ ಲೋಕಸಭಾ ಚುನಾವಣೆ ಸಂಬಂಧ ಪ್ರಚಾರ ನಡೆಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಹೀಗಾಗಿ ಅವರ ವಿರುದ್ಧ ಚುನಾವಣಾಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದರು.
ತುಂಗಾನಗರ ಪೊಲೀಸ್ ಠಾಣೆಗೆ ಈಶ್ವರಪ್ಪ ವಿರುದ್ಧ ನೀಡಿದಂತ ದೂರಿನ ಹಿನ್ನಲೆಯಲ್ಲಿ, ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಈ ಮೂಲಕ ಬಿಜೆಪಿ ಬಂಡಾಯ ಅಭ್ಯರ್ಥಿಗೆ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣದ ಬಿಸಿ ಮುಟ್ಟಿದಂತೆ ಆಗಿದೆ.
ತಾಂಡಾಗಳನ್ನು `ಕಂದಾಯ ಗ್ರಾಮ’ಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್ : ಸಚಿವ ಪ್ರಿಯಾಂಕ್ ಖರ್ಗೆ
‘ಮತ ಕೇಳುತ್ತಿಲ್ಲ’: ಪ್ರತಿಪಕ್ಷಗಳ ರ್ಯಾಲಿಯಲ್ಲಿ ಲಾಕಪ್ನಿಂದ ಪತಿಯ ಸಂದೇಶ ಓದಿದ ‘ಸುನೀತಾ ಕೇಜ್ರಿವಾಲ್’