ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮತ್ತು ಮತದಾನದ ಪ್ರಮಾಣ ಹೆಚ್ಚಿಸುವ ಸಲುವಾಗಿ ವಿಂಟೇಜ್ ಕಾರ್ ಹಾಗೂ ಬೈಕ್ ಗಳ ರ್ಯಾಲಿ ಕಾರ್ಯಕ್ರಮಕ್ಕೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಚಾಲನೆ ನೀಡಿದರು.
ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಮತದಾನವು ಇದೇ ಏಪ್ರಿಲ್ 26 ರಂದು ನಡೆಯಲಿದ್ದು, ವಿವಿಧ ಯೋಜನೆಗಳನ್ನು ರೂಪಿಸಿಕೊಂಡು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ವಿಂಟೇಜ್ ಕಾರುಗಳು ಹಾಗೂ ದ್ವಿಚಕ್ರ ವಾಹನಗಳು ರ್ಯಾಲಿ ಮಾಡುವ ಮೂಲಕ ಲೋಕ ಸಭಾ ಚುನಾವಣೆಯಲ್ಲಿ ಹೆಚ್ಚು ಮತದಾನ ಮಾಡುವಂತೆ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.
ನಗರ ವ್ಯಾಪ್ತಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಶೇಖಡಾವಾರು ಮತದಾನ ಆಗುತ್ತಿಲ್ಲ. ಈ ನಿಟ್ಟಿನಲ್ಲಿ ತಳಮಟ್ಟದಲ್ಲಿ ಯೋಜನೆಗಳನ್ನು ರೂಪಿಸಿಕೊಂಡು ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಪ್ರತಿಜ್ಞಾ ವಿಧಿ ಸ್ವೀಕಾರ:
ಲೋಕಸಭಾ ಚುನಾವಣೆ ಹಿನ್ನೆಲೆ ವಿಂಟೇಜ್ ಕಾರ್ ರ್ಯಾಲಿ ವೇಳೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಪ್ರತಿಜ್ಙಾ ವಿಧಿಯನ್ನು ಬೋಧಿಸಿದರು. ಸ್ಥಳದಲ್ಲಿ ನೆರೆದಿದ್ದವರೆಲ್ಲರೂ ಪ್ರತಿಜ್ಙಾ ವಿಧಿಯನ್ನು ಸ್ವೀಕರಿಸಿದರು.
ವಿಂಟೇಜ್ ಕಾರ್ ಹಾಗೂ ಬೈಕ್ ಗಳ ರ್ಯಾಲಿ ಸಾಗಿದ ಹಾದಿ:
ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ಸ್ ನಿಂದ ಪ್ರಾರಂಭವಾಗಿ ಇನ್ಫೆಂಟ್ರಿ ರಸ್ತೆ, ಎಂ.ಜಿ ರಸ್ತೆ(ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಮೂಲಕ), ಟ್ರಿನಿಟಿ ವೃತ್ತ, ರೆಸಿಡೆನ್ಸಿ ರಸ್ತೆ ಮೂಲಕ ಕಂಠೀರವ ಕ್ರೀಡಾಂಗಣದ ಬಳಿ ರ್ಯಾಲಿ ಮುಕ್ತಾಯವಾಯಿತು.
ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಕಾಂತರಾಜು, ಸ್ವೀಪ್ ನೋಡಲ್ ಅಧಿಕಾರಿಯಾದ ಪ್ರತಿಭಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ತಾಂಡಾಗಳನ್ನು `ಕಂದಾಯ ಗ್ರಾಮ’ಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್ : ಸಚಿವ ಪ್ರಿಯಾಂಕ್ ಖರ್ಗೆ