ದಕ್ಷಿಣಕನ್ನಡ : ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರಲ್ಲಿ ಓರ್ವ ಯುವಕ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭುರೂ ಬಳಿ ನಡೆದಿದೆ. ಉಳಿದ ಇನ್ನಿಬ್ಬರು ಯುವಕರನ್ನು ಸ್ಥಳೀಯ ನಿವಾಸಿ ರಕ್ಷಿಸಿದ್ದಾರೆ.
ಬಂಟ್ವಾಳ ತಾಲೂಕಿನ ಶಂಭುರು ಬಳಿ ನೇತ್ರಾವತಿ ನದಿಯಲ್ಲಿ ಮುಳುಗಿ ಯುವಕನೋರ್ವ ಸಾವನ್ನಪ್ಪಿದ್ದು, ನದಿಯಲ್ಲಿ ಈಜಲು ಮೂವರು ಯುವಕರು ತೆರಳಿದ್ದರು. ಈ ವೇಳೆ ಓರ್ವ ಯುವಕ ಸಾವನ್ನಪ್ಪಿದ್ದು ಸ್ಥಳೀಯ ನಿವಾಸಿ ಮತ್ತಿಬರನ್ನು ಸ್ಥಳೀಯ ನಿವಾಸಿ ಮಹಮ್ಮದ್ ಎನ್ನುವವರು ರಕ್ಷಿಸಿದ್ದಾರೆ.ಘಟನೆ ಕುರಿತಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.