ನವದೆಹಲಿ: ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಏಪ್ರಿಲ್.15ರವರೆಗೆ ನ್ಯಾಯಾಂಗ ಬಂಧನ ನೀಡಿ ಕೋರ್ಟ್ ಆದೇಶಿಸಿದೆ.
ಅಬಕಾರಿ ನೀತಿ ಪರಿಷ್ಕರಣೆ ಅವ್ಯವಹಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿತ್ತು. ಇಡಿ ಕಸ್ಟಡಿ ಅವಧಿ ಇಂದು ಅಂತ್ಯಗೊಂಡಿತ್ತು. ಈ ಹಿನ್ನಲೆಯಲ್ಲಿ ಈ ಪ್ರಕರಣದ ವಿಚಾರಣೆ ನಡೆಸಿದಂತ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲು ನಿರ್ದೇಶನ ನೀಡುವಂತೆ ಕೋರಿ ಜಾರಿ ನಿರ್ದೇಶನಾಲಯವು ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಈ ಸಮಯದಲ್ಲಿ ಹೆಚ್ಚಿನ ಕಸ್ಟಡಿ ವಿಚಾರಣೆ ಅಗತ್ಯವಿಲ್ಲ ಎಂದು ಹೇಳಿ, ಏಪ್ರಿಲ್.15ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಈ ಹಿನ್ನಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ನೀತಿ ಪರಿಷ್ಕರಣೆ ಅವ್ಯವಹಾರ ಪ್ರಕರಣದಲ್ಲಿ ತಿಹಾರ್ ಜೈಲಿಗೆ ಶಿಫ್ಟ್ ಆಗಲಿದ್ದಾರೆ.
Excise policy case | Delhi's Rouse Avenue court sends Delhi CM Arvind Kejriwal to judicial custody till April 15 pic.twitter.com/EQhviDECmF
— ANI (@ANI) April 1, 2024
BREAKING: ‘ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ ಪ್ರಕರಣ’ದಲ್ಲಿ ‘ನಟ ದರ್ಶನ್’ಗೆ ಪೊಲೀಸರಿಂದ ಬಿಗ್ ರಿಲೀಫ್
‘ತೆರಿಗೆ ನಿಯಮ’ದಲ್ಲಿ ಯಾವುದೇ ಹೊಸ ಬದಲಾವಣೆಯಿಲ್ಲ: ಹಣಕಾಸು ಸಚಿವಾಲಯ ಸ್ಪಷ್ಟನೆ | New Tax Rules