ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಬಿಕೆ ನಾಯ್ಡು ವಿರುದ್ಧ ಇದೀಗ FIR ದಾಖಲಾಗಿದೆ.
ಬೆಂಗಳೂರಿನ ಹೈ ಗ್ರೌಂಡ್ ಠಾಣೆಯ ಪೊಲೀಸರಿಂದ FIR ದಾಖಳಿಸಿಕೊಳ್ಳಲಾಗಿದೆ.ಬಿಜೆಪಿ ಕಾನೂನು ಪ್ರಕೋಷ್ಟ ಮಾಜಿ ಸಂಚಾಲಕ ಯೋಗೇಂದ್ರ ಹೊಡಗಟ್ಟ ಅವರಿಂದ ದೂರು ಸಲ್ಲಿಸಲಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟಿಗೆ ಅವರು ಖಾಸಗಿ ದೂರನ್ನು ಸಲ್ಲಿಸಿದ್ದರು.
ಬಿಜೆಪಿಯ ನಾನು ಕರಸೇವಕ ನನ್ನನ್ನು ಬಂಧಿಸಿ ಅಭಿಯಾನದ ಕುರಿತಂತೆ ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು.ಈ ವೇಳೆ ಕಾಂಗ್ರೆಸ್ ಪಕ್ಷ ತಿರುಚಿದ ಪೋಸ್ಟ್ ಹಂಚಿಕೊಂಡಿತ್ತು. ಫೋರ್ಜರಿ ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು.