ಚಾಮರಾಜನಗರ : ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇತ್ತೀಚಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಗೂಂಡಾ ಪದಬಳಕೆ ಮಾಡಿದ್ದರು. ಇದೀಗ ಅವರಿಗೆ ಚುನಾವಣಾ ಆಯೋಗದಿಂದ ನೋಟಿಸ್ ಬಂದಿದೆ ಎಂದು ಪಶು ಸಂಗೋಪಾನ ಸಚಿವ ಕೆ ವೆಂಕಟೇಶ್ ತಿಳಿಸಿದರು.
ಯತೀಂದ್ರ ಅವರು ಅಮಿತ್ ಶಾ ವಿರುದ್ಧ ಗುಂಡ ಪದಬಳಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಚಿವ ಕೆ ವೆಂಕಟೇಶ್ ಹೇಳಿಕೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಟಿ ನರಸೀಪುರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಸಚಿವ ಕೆ ವೆಂಕಟೇಶ್ ಈ ಕುರಿತು ತಿಳಿಸಿದರು.
ಯತೀಂದ್ರ ಅವರು ಅಮಿತ್ ಷಾ ವಿರುದ್ಧ ಗೂಂಡ ಹೇಳಿಕೆ ಹೇಳಿದ್ದಕ್ಕೆ ನೋಟಿಸ್ ಕೊಡಿಸಿದ್ದಾರೆ. ಯತೀಂದ್ರಗೆ ನೋಟಿಸ್ ಕೊಡಿಸುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಸಚಿವ ಕೆ ವೆಂಕಟೇಶ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇತ್ತೀಚಿಗೆ ಯತಿಂದ್ರ ಸಿದ್ದರಾಮಯ್ಯ ಅವರು ಅಮಿತ್ ಶಾ ಅವರನ್ನು ಗೂಂಡಾ ಅವರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಅಂತಹವರನ್ನು ಮೋದಿಯವರು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದ್ದರು.