ಬೆಂಗಳೂರು: 2024-25ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್ 12(1)(ಬಿ) ಮತ್ತು 12(1)(ಸಿ) ಅಡಿ ಪುವೇಶ ಪ್ರಕ್ರಿಯೆ ನಡೆಸಲು ಉಲ್ಲೇಖ-03ರ ಸುತ್ತೋಲೆಯನ್ವಯ ಕ್ರಮವಹಿಸಲಾಗಿದೆ.
ಕಾರ್ಯಸೂಚಿಯನ್ವಯ ಆರ್.ಟಿ.ಇ ಅಡಿ ದಾಖಲಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿ 22.04.2024 ಎಂದು ನಿಗದಿಪಡಿಸಲಾಗಿತ್ತು. ಉಪನಿರ್ದೇಶಕರುಗಳಿಂದ ಸ್ವೀಕೃತಗೊಂಡ ಮನವಿಗಳ ಮೇರೆಗೆ ಅರ್ಜಿ ಸಲ್ಲಿಸುವ ಅವಧಿಯ ದಿನಾಂಕವನ್ನು 20.05.2024ರವರೆಗೆ ವಿಸ್ತರಿಸಲಾಗಿದೆ ಹಾಗೂ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ.