ಬೆಂಗಳೂರು : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶ ಏಪ್ರಿಲ್ ೨ ನೇ ವಾರದಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಮಾರ್ಚ್ 1 ರಿಂದ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಿದ್ದು, ಮಾ. 25 ರಿಂದಲೇ ಮೌಲ್ಯಮಾಪನ ಆರಂಭಿಸಲಾಗಿದೆ. ಮೌಲ್ಯಮಾಪನ ಕಾರ್ಯ ಅಂತಿಮ ಘಟಕ್ಕೆ ತಲುಪಿದೆ.
ಎಲ್ಲ ಅಂದುಕೊಂಡಂತೆ ನಡೆದರೆ ಏಪ್ರಿಲ್ ಎರಡನೇ ವಾರ ಅಂದರೆ ಏಪ್ರಿಲ್ 10 ಅಥವಾ ಅಸುಪಾಸಿನ ದಿನದಲ್ಲಿ ಫಲಿತಾಂಶ ಪ್ರಕಟಿಸಲು ಇಲಾಖೆ ಸಿದ್ಧತೆ ನಡೆಸಿದೆ.