ಬೆಂಗಳೂರು : ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ರಜೆ ದಿನಗಳಲ್ಲೂ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಮುಂದುವರೆಸಲು ನಿರ್ಧರಿಸಲಾಗಿದೆ.
1ರಿಂದ 8ನೇ ತರಗತಿಯ ಮಕ್ಕಳಿಗೆ ಏಪ್ರಿಲ್ 11 ರಿಂದ ಮೇ 28ರವರೆಗೆ ಮಧ್ಯಾಹ್ನದ ಬಿಸಿಯೂಟ ವಿತರಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಸರ್ಕಾರ ಈಗಾಗಳೇ ಬರ ಪೀಡಿತ ತಾಲ್ಲೂಕುಗಳ ಘೋಷಣೆ ಮಾಡಿದೆ. ಬರ ಪೀಡಿತ ತಾಲೂಕುಗಳಲ್ಲಿ ಬೇಸಿಗೆ ರಜೆಯಲ್ಲಿಯೂ ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತದೆ.
2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ 223 ತಾಲ್ಲೂಕುಗಳನ್ನು ಬರ ಪಿಡೀತ ತಾಲ್ಲೂಗಳೆಂದು ಸರ್ಕಾರವು ಘೋಷಿಸಿದೆ.