ಶಿವಮೊಗ್ಗ : ಬಿಜೆಪಿ ರಾಜ್ಯ ಅಧ್ಯಕ್ಷರನ್ನು ಬದಲಾಯಿಸಿದ್ರೆ ನಾಳೆಯೇ ಚುನಾವಣಾ ಕಣದಿಂದ ಹಿಂದೆ ಸರಿಯುತ್ತೇನೆ ಎಂದು ಶಿವಮೊಗ್ಗ ಲೋಕಸಭೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಶತಸಿದ್ದ ಆದರೆ ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸಿದ್ರೆ ನಾಳೆಯೇ ಚುನಾವಣೆಯಿಂದ ಹಿಂದೆ ಸರಿಯುತ್ತೇನೆ ಎಂದರು.
ಅಮಿತ್ ಶಾ ಅವರು ನನಗೆ ಕರೆ ಮಾಡಿದ್ದರು. ಲೋಕಸಭೆ ಚುನಾವಣೆಯಿಂದ ಹಿಂದೆ ಸರಿಯುವಂತೆ ಹೇಳಿದ್ದಾರೆ. ಆದರೆ ನಾನು ಅವರಿಗೆ ಮನವರಿಕೆ ಮಾಡಿದ್ದೇನೆ. ನಾಳೆ ದೆಹಲಿಗೆ ಬರುವಂತೆ ಸೂಚನೆ ನಿಡದ್ದಾರೆ. ಹಾಗಾಗಿ ನಾಳೆ ದೆಹಲಿಗೆ ಹೋಗಿ ವರಿಷ್ಠರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.