ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ತಮ್ಮ ಮಗನಿಗೆ ಟಿಕೆಟ್ ಸಿಗಲಿಲ್ಲವೆಂದು ಬಂಡಾಯ ವೆದ್ದಿರುವ ಬಿಜೆಪಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇದೀಗ ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೆ ಎಸ್ ಈಶ್ವರಪ್ಪ ಅವರೊಂದಿಗೆ ದೂರವಾಣಿ ಸಂಪರ್ಕ ಮಾಡಿ ದೆಹಲಿಗೆ ಬರುವಂತೆ ತಿಳಿಸಿದ್ದಾರೆ ಹಾಗಾಗಿ ನಾಳೆ ಕೆಎಸ್ ಈಶ್ವರಪ್ಪ ದೆಹಲಿಗೆ ತರಲಿದ್ದಾರೆ ಎಂದು ತಿಳಿದುಬಂದಿದೆ.
ನಾಳೆ ಈಶ್ವರಪ್ಪ ದಿಲ್ಲಿಗೆ ತೆರಳಲಿದ್ದಾರೆ.ಸೋಮವಾರ ಈಶ್ವರಪ್ಪ ಅವರಿಗೆ ಕರೆ ಮಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ, ಯಡಿಯೂರಪ್ಪ ವಿರುದ್ಧ ತಿರುಗಿ ಬಿದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಜ್ಜಾಗಿದ್ದಾರೆ.ನನ್ನ ಮಗ ಕಾಂತೇಶ್ ಗೆ ಹಾವೇರಿಯಲ್ಲಿ ಟಿಕೆಟ್ ತಪ್ಪಿಸಿದ್ದಾರೆ,ನಾನು ಶಿವಮೊಗ್ಗದಲ್ಲಿ ಸ್ಪರ್ಧಿಸಿ ಅವರ ಪುತ್ರ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸುತ್ತೇನೆ ಅಂತ ಪ್ರತಿಜ್ಞೆ ಮಾಡಿದ್ದಾರೆ.
ಕಳೆದ ಹದಿನೈದು ದಿನಗಳಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈಶ್ವರಪ್ಪ ಅವರ ಓಡಾಟ ಜೋರಾಗಿದೆ.ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರ ಬಂಡಾಯ ಶಮನಕ್ಕೆ ಮುಂದಾದ ಬಿಜೆಪಿ ನಾಯಕರು, ಇದೇ ಕಾರಣಕ್ಕಾಗಿ ಸೋಮವಾರ ಈಶ್ವರಪ್ಪ ಅವರಿಗೆ ಅಮಿತ್ ಷಾ ಕರೆ ಮಾಡಿ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ.
ತಕ್ಷಣ ದಿಲ್ಲಿಗೆ ಬರಲು ಷಾ ಮನವಿ ಮಾಡಿದ್ದಾರೆ.ದಿಲ್ಲಿಗೆ ಬರುತ್ತೇನೆ.ಅದರೆ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ. ನಾನು ಸ್ಪರ್ಧಿಸುತ್ತೇನೆ.ಗೆದ್ದು ಬಿಜೆಪಿಗೇ ಮರಳುತ್ತೇನೆ.ನಿಮ್ಮ ಬೆಂಬಲ ಇರಲಿ ಅಂತ ಅಮಿತ್ ಷಾ ಅವರಿಗೆ ಈಶ್ವರಪ್ಪ ತಿಳಿಸಿದ್ದಾರೆ. ದಿಲ್ಲಿಗೆ ಬಂದಾಗ ಇಲ್ಲಿ ಏನೇನಾಗಿದೆ ಅಂತ ಹೇಳುತ್ತೇನೆ ಎಂದು ಈಶ್ವರಪ್ಪ ತಿಳಿಸಿದರು.