ರಾಯಚೂರು : ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರರ ನಡುವೆ ಗಲಾಟೆ ನಡೆದಿದ್ದು ಗಲಾಟೆಯು ತೀವ್ರ ವಿಕೋಪಕ್ಕೆ ತಿರುಗಿ ತಮ್ಮನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಜೀನೂರಿನಲ್ಲಿ ನಡೆದಿದೆ.
ಫಿನ್ಲೆಂಡ್: 12 ವರ್ಷದ ಬಾಲಕನಿಂದ ಗುಂಡಿನ ದಾಳಿ : ಮೂವರು ವಿದ್ಯಾರ್ಥಿಗಳಿಗೆ ಗಾಯ | Finland Shooting
ರಾಮಣ್ಣ (36) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಗ್ರಾಮದಲ್ಲಿದ್ದ 2 ಎಕರೆ 10 ಗುಂಟೆ ಜಮೀನನ್ನು ರಾಮಣ್ಣ ತನ್ನ ಉಳಿದ ಸಹೋದರರಿಗೆ ಬಿಡದೆ ತಾನೇ ಉಳುಮೆ ಮಾಡುತ್ತಿದ್ದ. ಇದೇ ವಿಚಾರಕ್ಕೆ ರಾಮಣ್ಣನ ಅಣ್ಣಂದಿರಾದ ಮೂಕಯ್ಯ, ಮುದಕಯ್ಯ ಹಾಗೂ ಅವರ ಮಕ್ಕಳು ಸೇರಿಕೊಂಡು ರಾಮಣ್ಣನ ಮೇಲೆ ಗಲಾಟೆ ಮಾಡಿದ್ದಾರೆ. ಬಳಿಕ ಕೊಡಲಿ ಮತ್ತು ಬೆತ್ತದಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.
BREAKING : ಇಂಗ್ಲೆಂಡ್ ತಂಡಕ್ಕೆ ಬಿಗ್ ಶಾಕ್ : 2024ರ ಟಿ20 ‘ವಿಶ್ವಕಪ್’ನಿಂದ ‘ಬೆನ್ ಸ್ಟೋಕ್ಸ್’ ಔಟ್
ಗಲಾಟೆಯಲ್ಲಿ ರಾಮಣ್ಣ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಗಲಾಟೆಯಲ್ಲಿ ಮೃತನ ಪತ್ನಿ ರತ್ನಮ್ಮ ಹಾಗೂ ಅಕ್ಕ ಯಲ್ಲಮ್ಮ ಗಂಭೀರವಾಗಿ ಗಾಯಗೊಂಡಿದ್ದು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.