ನವದೆಹಲಿ: ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅನಾರೋಗ್ಯದಿಂದ ಬಳಲುತ್ತಿದ್ದು, 12 ದಿನಗಳಲ್ಲಿ 4.5 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕಿ ಅತಿಶಿ ಎಕ್ಸ್ ( ಈ ಹಿಂದಿನ ಟ್ವಿಟರ್) ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ತೀವ್ರ ಮಧುಮೇಹದಿಂದ ಬಳಲುತ್ತಿದ್ದಾರೆ. ಅದರೂ ಅವರು ಆರೋಗ್ಯ ಸಮಸ್ಯೆಗಳ ಹೊರತಾಗಿಯೂ, ಅವರು ದಿನಕ್ಕೆ 24 ಗಂಟೆಗಳ ಕಾಲ ದೇಶ ಸೇವೆ ಮಾಡಲು ಕೆಲಸ ಮಾಡುತ್ತಿದ್ದರು. ಬಂಧನದ ನಂತರ ಅರವಿಂದ್ ಕೇಜ್ರಿವಾಲ್ 4.5 ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಇದು ತುಂಬಾ ಆತಂಕಕಾರಿಯಾಗಿದೆ. ಇಂದು, ಬಿಜೆಪಿ ಅವರನ್ನು ಜೈಲಿಗೆ ಹಾಕುವ ಮೂಲಕ ಅವರ ಆರೋಗ್ಯವನ್ನು ಅಪಾಯಕ್ಕೆ ಸಿಲುಕಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಆದಾಗ್ಯೂ, ಅವರ ಹೇಳಿಕೆಗಳನ್ನು ನಿರಾಕರಿಸಿದ ತಿಹಾರ್ ಅಧಿಕಾರಿಗಳು ಕೇಜ್ರಿವಾಲ್ ಆರೋಗ್ಯವಾಗಿದ್ದಾರೆ ಮತ್ತು ಜೈಲಿನ ವೈದ್ಯರು ಯಾವುದೇ ಆರೋಗ್ಯ ಸ್ಥಿತಿ ಅಥವಾ ಸಮಸ್ಯೆಯನ್ನು ಸೂಚಿಸಿಲ್ಲ ಎಂದು ಹೇಳಿದ್ದಾರೆ. ವೈದ್ಯಕೀಯ ವರದಿಗಳ ಪ್ರಕಾರ, ಅವರ ಸಕ್ಕರೆ ಮಟ್ಟವು ಕಳೆದ ಕೆಲವು ದಿನಗಳಿಂದ ಏರಿಳಿತಗೊಳ್ಳುತ್ತಿದೆ ಮತ್ತು ಒಮ್ಮೆ 50 ಕ್ಕಿಂತ ಕಡಿಮೆಯಾಗಿದೆ. ಅವರ ಸಕ್ಕರೆ ಮಟ್ಟವನ್ನು ಗಮನಿಸಲು ಔಷಧಿಗಳು ಮತ್ತು ಸಕ್ಕರೆ ಸಂವೇದಕ ಮಾನಿಟರ್ ಅನ್ನು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.