ಕೊಪ್ಪಳ : ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರದ ವೇಳೆ ವರುಣ ಕ್ಷೇತ್ರದಿಂದ ಅರವತ್ತು ಸಾವಿರ ಲೀಡ್ ಗಳಿಂದ ಗೆಲ್ಲಿಸಿದರೆ ನನ್ನನ್ನು ಯಾರು ಮುಟ್ಟೋಕಾಗಲ್ಲ ಎಂದು ಸಿಎಂ ಸ್ಥಾನದ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದರು ಇದೀಗ ಮಾಜಿ ಸಚಿವ ಅಕ್ಬಲ್ ಇನ್ ಸಾರಿ ಅವರು ಕೊಪ್ಪಳದಲ್ಲಿದ್ದರೆ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
BREAKING : ಬಂಧನ ಪ್ರಶ್ನಿಸಿ ದೆಹಲಿ ಸಿಎಂ ‘ಕೇಜ್ರಿವಾಲ್’ ಸಲ್ಲಿಸಿದ್ದ ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಮಾತನಾಡಿದ ಅವರು, ಹಿಟ್ನಾಳ ಗೆದ್ದರೆ ಸಿದ್ದರಾಮಯ್ಯ ಅವರು ಸಿಎಂ ಆಗಿ ಮುಂದುವರೆಯುತ್ತಾರೆ.ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ರಾಜಶೇಖರ್ ಹಿಟ್ನಾಳ ಅವರು ಗೆಲ್ಲಬೇಕು.ಅವರಿದ್ದರೆ ಮಾತ್ರ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂದು ಲೋಕಸಭಾ ಚುನಾವಣೆ ಸಿಎಂಕೆ ನಿರ್ಣಾಯಕ ಎಂದು ಇಕ್ಬಾಲ್ ಅನ್ಸಾರಿ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಬೇಕಾದರೆ ಎಲ್ಲರೂ ಶ್ರಮಪಡಲೇಬೇಕು ಎಂದು ಗಂಗಾವತಿ ಪಟ್ಟಣದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೇಳಿಕೆ ನೀಡಿದ್ದಾರೆ.