ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆಯಿಂದ ತತ್ತರಿಸಿ ಜನ, ಜಾನುವಾರು ತತ್ತರಿಸಿ ಹೋಗಿದ್ದಾರೆ. ಅಬ್ಬಾ ಎಷ್ಟು ಹೊತ್ತಿಗೆ ಮಳೆ ಬರುತ್ತಪ್ಪ ಅಂತ ಕಾಯ್ತಿದ್ದಾರೆ. ಹೀಗೆ ಮಳೆಗಾಗಿ ಕಾಯುತ್ತಿರೋ ಜನತೆಗೆ ಕೂಲ್ ಆಗೋ ಸುದ್ದಿಯನ್ನು ಹವಾಮಾನ ಇಲಾಖೆ ನೀಡಿದೆ. ಅದೇ ಮುಂದಿನ 5 ದಿನ ಭಾರೀ ಮಳೆಯಾಗವಿದೆ ಅಂತ ಮುನ್ಸೂಚನೆ ನೀಡಿದೆ.
ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದ್ದು, ಮುಂದಿನ ಐದು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂದಿನ ಐದು ದಿನ ಉತ್ತಮ ಮಳೆಯಾಗಲಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಧಾರವಾಡ, ಉಡುಪಿ, ಉತ್ತರ ಕನ್ನಡ, ಚಿತ್ರದುರ್ಗ, ಹಾವೇರಿ, ತುಮಕೂರು, ಚಾಮರಾಜನಗರ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಮಧೆಯಾಗುವ ಸಾಧ್ಯತೆಯಿದೆ ಅಂತ ತಿಳಿಸಿದೆ.
ಅಂದಹಾಗೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೇಸಿಗೆಯ ಬಿಸಿಲ ತಾಪ ಹೆಚ್ಚಾಗಿದೆ. 35 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾಗಿ, ಬಿಸಿಲ ಶಾಕಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಇದೇ ಸಂದರ್ಭದಲ್ಲಿ ಮುಂದಿನ ಐದು ದಿನ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
‘CTET 2024 ನೋಂದಣಿ’ಗೆ ಕೊನೆ ದಿನಾಂಕ ವಿಸ್ತರಣೆ, ಕನ್ನಡ ಸೇರಿ 20 ಭಾಷೆಗಳಲ್ಲಿ ಪರೀಕ್ಷೆ, ಶೀಘ್ರ ಅರ್ಜಿ ಸಲ್ಲಿಸಿ